More

    ಈಡಿಗ ಅಭಿವೃದ್ಧಿ ನಿಗಮಕ್ಕಾಗಿ ಪಾದಯಾತ್ರೆ; ಪ್ರಣವಾನಂದ ಸ್ವಾಮೀಜಿ ಹೇಳಿಕೆ

    ರಾಯಚೂರು: ಬ್ರಹ್ಮಶ್ರೀ ನಾರಾಯಣಗುರು ಹೆಸರಿನಲ್ಲಿ ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜ.6 ರಿಂದ ಮಂಗಳೂರಿನ ಕುದ್ರೋಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದರು.

    ಉಡುಪಿ, ಶಿವಮೊಗ್ಗ, ಸಾಗರ, ಸೊರಬ, ಶಿಕಾರಿಪುರ, ಚನ್ನಗಿರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮುಖಾಂತರ ಬೆಂಗಳೂರುವರೆಗೆ ಪಾದಯಾತ್ರೆ ನಡೆಯಲಿದೆ. ಈಡಿಗ ಸಮುದಾಯದ ಕುಲ ಕಸುಬಿಗೆ ಸರ್ಕಾರ ಅನುಮತಿ ನೀಡಬೇಕು. ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕು. ಸಮುದಾಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಅದಕ್ಕಾಗಿಯೇ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಮಂಗಳೂರು, ಉಡುಪಿ, ಕಾರವಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈಡಿಗ ಸಮುದಾಯದವರಿದ್ದಾರೆ. ಆದ್ದರಿಂದ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಮೀಸಲಾತಿ ನೀಡಬೇಕು. ಅನೇಕ ಶಾಸಕರು ಸಮುದಾಯದ ಸಮಸ್ಯೆಗಳನ್ನು ಪರಿಹಾರ ಮಾಡುವ ರಾಜಕೀಯ ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ದೂರಿದರು.

    ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿರುವುದು ರಾಜಕೀಯ ಷಡ್ಯಂತ್ರ. ಹಿಂದುಳಿದ ಸಮುದಾಯವನ್ನು ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ. ಸಮುದಾಯದ ಸಚಿವ ಮತ್ತು ಶಾಸಕರು ರಾಜೀನಾಮೆ ನೀಡುವ ಮೂಲಕ ನಮ್ಮ ಪರವಾಗಿ ಧ್ವನಿ ಎತ್ತುವಂತಹ ಕಾರ್ಯ ಮಾಡುವುದು ಅಗತ್ಯ ಎಂದು ಹೇಳಿದರು. ಸಮುದಾಯದ ಜಿಲ್ಲಾಧ್ಯಕ್ಷ ರಾಘವೇಂದ್ರ ಗೌಡ, ಪ್ರಮುಖರಾದ ಗುರುರಾಜಗೌಡ, ಸತ್ಯನಾರಾಯಣ, ಸುರೇಶ ಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts