More

    ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಣವೇ ಅಸ್ತ್ರ

    ರಾಯಚೂರು: ಯಾವುದೇ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಣವೇ ಅಸ್ತ್ರವಾಗಿದ್ದು, ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮುದಾಯದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

    ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು. ವೀರಶೈವ ಸಮುದಾಯದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳು ಉನ್ನತ ಹುದ್ದೆ ಪಡೆಯುತ್ತಿದ್ದಾರೆ ಎಂದರು.

    ಇತ್ತೀಚಿನ ದಿನಗಳಲ್ಲಿ ಲಿಂಗಾಯತ ಸಮುದಾಯದ ಶೇ.70 ಜನರು ಕೃಷಿ ಬಿಟ್ಟು ಪಟ್ಟಣ ಸೇರುತ್ತಿದ್ದಾರೆ. ಇದರಿಂದ ಮುಂದಿನ ದಿನದಲ್ಲಿ ಕೃಷಿ ಕ್ಷೇತ್ರ ಸಂಕಷ್ಟಕ್ಕೀಡಾಗಲಿದೆ. ಹೀಗಾಗಿ ಮಕ್ಕಳಿಗೆ ಶಿಕ್ಷಣದೊಂದಿಗೆ ಕೃಷಿ ಕ್ಷೇತ್ರದ ಮಾಹಿತಿ ನೀಡಬೇಕು. 180 ಮಕ್ಕಳು ಶೇ.90ಕ್ಕಿಂತ ಅಧಿಕ ಅಂಕ ಪಡೆದು ಸಾಧನೆ ಮಾಡಿದ್ದಾರೆ. ಮುಂದಿನ ದಿನದಲ್ಲಿ ವೀರಶೈವ ಲಿಂಗಾಯತ ಮಹಾಸಭಾಕ್ಕೆ ಸರ್ಕಾರದಿಂದ 5.5 ಎಕರೆ ಭೂಮಿ ಕೊಡಿಸುವೆ. ಈ ಪೈಕಿ 1 ಎಕರೆ ಜಮೀನಿನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ವೀರಶೈವ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts