ಚುನಾವಣೆ ವೇಳೆ ಬಿಜೆಪಿಗರಿಗೆ ಮೈಮೇಲೆ ದೆವ್ವ ಬರುತ್ತೆ: ಎನ್.ಎಸ್ ಬೋಸರಾಜು ಕಿಡಿ

ರಾಯಚೂರು: ನಾಗಮಂಗಲದಲ್ಲಾದ ಗಲಭೆಯ ಕುರಿತು ರಾಷ್ಟ್ರ ಮಟ್ಟದಲ್ಲಿ ಮಾತನಾಡುವ ಬಿಜೆಪಿಗರು ತಮ್ಮ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಹೇಳಿದರು.

ರಾಯಚೂರು ನಗರದಲ್ಲಿ ಬುಧವಾರ ಮಾತನಾಡಿ, ಕೆಕೆಆರ್‌ಡಿಬಿ ಅನುದಾನವನ್ನು ತೆಲಂಗಾಣ ಚುನಾವಣೆಗೆ ಕಾಂಗ್ರೆಸ್ ಬಳಸಿಕೊಂಡಿದೆ ಎಂದು ಆರ್.ಅಶೋಕ ಸೇರಿದಂತೆ ಇತರೆ ಬಿಜೆಪಿಗರು ಹೇಳುತ್ತಿದ್ದಾರೆ. ಕೇವಲ ಚುನಾವಣೆ ಬಂದಾಗ ಮಾತ್ರ ಮೈಮೇಲೆ ದೆವ್ವ ಬಂದವರಂತೆ ಮೋದಿ ಸೇರಿದಂತೆ ಬಿಜೆಪಿ ನಾಯಕರು ವರ್ತಿಸುತ್ತಾರೆ. ಉಳಿದ ಸಂದರ್ಭಗಳಲ್ಲಿ ಬಾಯಿ ಬಿಚ್ಚುವುದಿಲ್ಲ ಎಂದು ಗುಡುಗಿದರು.

ಇದನ್ನೂ ಓದಿ: ನಗರ ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ: ಸಚಿವ ಬೋಸರಾಜು

ಇಲ್ಲಸಲ್ಲದ ಹೇಳಿಕೆಗಳನ್ನು ಹೇಳುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುವ ಕಾರ್ಯದಲ್ಲಿ ಬಿಜೆಪಿ ಪಕ್ಷ ತೊಡಗಿದೆ. ಆಪಾದನೆಗಳನ್ನು ಮಾಡುವುದೆ ಬಿಜೆಪಿಯ ಮುಖ್ಯ ಕೆಲಸವಾಗಿಬಿಟ್ಟಿದೆ. ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಎಲ್ಲಿಲ್ಲದ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಿದೆ ಎಂದರು.

ಸಿಬಿಐ, ಇಡಿ ಸೇರಿದಂತೆ ಇತರೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಜೆಪಿ ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಜನಪರವಾದ ಆಡಳಿತ ನೀಡುತ್ತಿದ್ದು, ರಾಜ್ಯ ಸರ್ಕಾರದಿಂದ ಹಗರಣಗಳಾದಲ್ಲಿ ಬಿಜೆಪಿ ಸಾಬೀತುಪಡಿಸಲಿ ಎಂದು ಬೋಸರಾಜು ಸವಾಲಾಕಿದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…