More

    ಚುನಾವಣೆ ಕರ್ತವ್ಯ ನಿರ್ಲಕ್ಷಿಸುವವರ ವಿರುದ್ಧ ಕ್ರಮ, ಚುನಾವಣಾ ವೀಕ್ಷಕ ಅಧ್ಯಕ್ಷ ಎನ್.ಜಯರಾಮ ಎಚ್ಚರಿಕೆ

    ರಾಯಚೂರು: ವಿಧಾನ ಪರಿಷತ್ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ತಮ್ಮ ಕೆಲಸವನ್ನು ಕಟ್ಟುನಿಟ್ಟಾಗಿ ನಿರ್ವಹಿಬೇಕು. ನಿರ್ಲಕ್ಷೃ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ಹಾಗೂ ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಎನ್.ಜಯರಾಮ ಎಚ್ಚರಿಕೆ ನೀಡಿದರು.

    ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ರಾಯಚೂರು-ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಶುಕ್ರವಾರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಮತದಾನ ಮತ್ತು ಮತ ಎಣಿಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

    ಮತದಾನಕ್ಕೆ ಕೆಲವೇ ದಿನ ಬಾಕಿ ಉಳಿದಿದ್ದು ಅಭ್ಯರ್ಥಿಗಳು ಮತದಾರರಿಗೆ ಆಸೆ, ಆಮಿಷಗಳನ್ನು ಒಡ್ಡುತ್ತಾರೆ. ಹೀಗಾಗಿ ಅಧಿಕಾರಿಗಳು ಎಲ್ಲ ಕಡೆ ಗಮನ ಹರಿಸಬೇಕು. ಮತದಾನ ಕೇಂದ್ರಗಳಲ್ಲಿನ ಸಿದ್ಧತೆಯನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಬೇಕು. ಮತದಾನವನ್ನು ಕಡ್ಡಾಯವಾಗಿ ಚಿತ್ರೀಕರಣ ಮಾಡಬೇಕು. ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಗೊಂದಲಕ್ಕೆ ಆಸ್ಪದವಿಲ್ಲದಂತೆ ಎಣಿಕೆ ಕಾರ್ಯವನ್ನು ನಡೆಸಬೇಕು. ಚುನಾವಣೆ ಆಯೋಗದಿಂದ ನೀಡಲಾದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಎನ್.ಜಯರಾಮ ತಿಳಿಸಿದರು.

    ಸಂವಾದದಲ್ಲಿ ರಾಯಚೂರು ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ ಕಿಶೋರ್, ಎಸ್ಪಿ ಬಿ.ನಿಖಿಲ್, ಜಿಲ್ಲಾ ಸ್ಪೀಪ್ ಸಮಿತಿ ಅಧ್ಯಕ್ಷೆ ಬಿ.ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts