More

    ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಮಾಹಿತಿ ಕೊಡಿ- ಡಿಸಿ ಚಂದ್ರಶೇಖರ ನಾಯಕ ಹೇಳಿಕೆ

    ರಾಯಚೂರು: ಚುನಾವಣೆಗಳನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಮತ್ತು ಚುನಾವಣೆ ಆಯೋಗಕ್ಕೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರಮುಖರ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಅಂತಿಮ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ ಹೆಸರುಗಳನ್ನು ಪಟ್ಟಿಗೆ ಸೇರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

    ಮತದಾನ ಪ್ರಕ್ರಿಯೆ ಕುರಿತು ಅರಿವು ಮೂಡಿಸಲು ವಿದ್ಯುನ್ಮಾನ ಮತ ಯಂತ್ರಗಳನ್ನು ಈಗಾಗಲೇ ಗ್ರಾಮೀಣ ಭಾಗಕ್ಕೆ ಕಳುಹಿಸಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈ ಯಂತ್ರಗಳು ತರಬೇತಿಗಾಗಿ ಕಳಿಸಿದ್ದು, ಜನರು ಹಾಗೂ ಪಕ್ಷದ ನಾಯಕರು ಗೊಂದಲಕ್ಕೆ ಒಳಗಾಗಬಾರದು.

    ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಜಿಲ್ಲಾಡಳಿತದಿಂದ ನೀರು ಹಾಗೂ ಶಾಮಿಯಾನಾ ವ್ಯವಸ್ಥೆ ಮಾಡಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಅಭ್ಯರ್ಥಿಗಳ ಕುರಿತು ಅವಹೇಳನಕಾರಿ ಸಂದೇಶಗಳನ್ನು ಹಾಕುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಅಕ್ರಮವಾಗಿ ಮದ್ಯ ಸಾಗಣೆ, ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಚಂದ್ರಶೇಖರ ನಾಯಕ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts