More

    ಮತದಾರರ ಪಟ್ಟಿ ಪರಿಷ್ಕರಣೆ ಮರು ಪರಿಶೀಲಿಸಿ: ಜಿಲ್ಲಾಧಿಕಾರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಆಗ್ರಹ

    ರಾಯಚೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 1.38 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ಈ ಕುರಿತು ಮರು ಪರಿಶೀಲನೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.

    ಈ ಕುರಿತು ಪಕ್ಷದ ನಿಯೋಗ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಸೋಮವಾರ ಮನವಿ ಸಲ್ಲಿಸಿ, ತೆಗೆದು ಹಾಕಲಾಗಿರುವ ಮತದಾರರ ಹೆಸರನ್ನು ಪಟ್ಟಿಯಲ್ಲಿ ಮರು ಸೇರ್ಪಡೆ ಮಾಡಬೇಕು, ಪರಿಷ್ಕರಣೆ ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

    ರಾಯಚೂರು ನಗರ ಕ್ಷೇತ್ರದಲ್ಲಿ 2022ರ ಮತದಾರರ ಪಟ್ಟಿಯಲ್ಲಿ 2.38 ಲಕ್ಷ ಮತದಾರರಿದ್ದಾರೆ. ಆದರೆ 2023ರ ಮತದಾರರ ಪಟ್ಟಿಯಲ್ಲಿ 2.13 ಸಾವಿರ ಮತದಾರರಿದ್ದಾರೆ. 24 ಸಾವಿರ ಮತದಾರರು ಕಡಿಮೆಯಾಗಿದ್ದಾರೆ. ಜತೆಗೆ 16 ಸಾವಿರ ಮತದಾರರನ್ನು ಸೇರಿಸಲಾಗಿದೆ. ಒಟ್ಟು 40 ಸಾವಿರ ಮತದಾರರನ್ನು ತೆಗೆದು ಹಾಕಲಾಗಿದೆ.

    ಆನ್‌ಲೈನ್‌ನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ತಾಂತ್ರಿಕ ತೊಂದರೆಯಾಗುತ್ತಿದ್ದು, ಚುನಾವಣೆ ಆಯೋಗದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿ, ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯನ್ನು ವಿಸ್ತರಣೆ ಮಾಡಿ, ಹೆಸರು ಸೇರ್ಪಡೆಗೆ ಅನುಕೂಲ ಕಲ್ಪಿಸಬೇಕು. ಕೆಲ ಬೂತ್‌ಗಳಲ್ಲಿ ಅನಧಿಕೃತವಾಗಿ ಕೈಬಿಟ್ಟ ಮತದಾರರ ಕುರಿತು ಖುದ್ದಾಗಿ ಪರಿಶೀಲನೆ ನಡೆಸಬೇಕೆಂದು ಆಗ್ರಹಿಸಿದರು.

    ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ತಾಂತ್ರಿಕ ದೋಷದಿಂದ ಸಮಸ್ಯೆಯಾಗಿದೆ. ಅದನ್ನು ಸರಿಪಡಿಸಲು ಜಾಗೃತಿ ಕಾರ್ಯಕ್ರಮದ ಮೂಲಕ ಹೆಸರು ಮರು ಸೇರ್ಪಡೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ನಿಯೋಗದಲ್ಲಿ ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು, ಪಕ್ಷದ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ರುದ್ರಪ್ಪ ಅಂಗಡಿ, ಡಾ.ರಜಾಕ್ ಉಸ್ತಾದ್, ಅಬ್ದುಲ್ ಕರೀಂ, ದೇವಣ್ಣ ನಾಯಕ, ನರಸಿಂಹ ನಾಯಕ, ಜಾವೀದ್ ಉಲ್ ಹಕ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts