More

    ಬಾಕಿ ಕಾಮಗಾರಿಗಳ ಪೂರ್ಣಕ್ಕೆ ಡಿಸೆಂಬರ್ ಗಡುವು

    ರಾಯಚೂರು: ಉದ್ಯೋಗ ಖಾತ್ರಿ ಯೋಜನೆ ಬಾಕಿ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಮೂಲಕ ಗರಿಷ್ಠ ಗುರಿ ತಲುಪಲು ಪ್ರಯತ್ನಿಸಬೇಕು ಎಂದು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಮುಖ್ಯ ಕಾರ್ಯಕ್ರಮ ಅಧಿಕಾರಿ ಪಿ.ಜಿ.ವೇಣುಗೋಪಾಲ ಸೂಚಿಸಿದರು.

    ಜಿಪಂ ಸಭಾಂಗಣದಲ್ಲಿ ಬುಧವಾರ ಉದ್ಯೋಗ ಖಾತ್ರಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ 1.60 ಲಕ್ಷ ಕಾಮಗಾರಿಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ. ಅದರಲ್ಲಿ 22 ಕಾಮಗಾರಿಗಳು ಪ್ರಗತಿಯಲ್ಲಿವೆ. 2021-22ನೇ ಸಾಲಿನ ಕಾಮಗಾರಿಗಳಲ್ಲಿ ಶೇ.54.72 ಪ್ರಗತಿ ಸಾಧಿಸಲಾಗಿದ್ದು, ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

    ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಕಾರ್ಮಿಕರಿಗೆ ನಿಗದಿತ ಸಮಯದೊಳಗೆ ಕೂಲಿ ಪಾವತಿಸಬೇಕು. ಯೋಜನೆಯಡಿ ಕೈಗೊಳ್ಳುವ ಕಾಮಗಾರಿ ವೆಚ್ಚದ ಕುರಿತು ಎಲ್ಲ ರೀತಿಯಲ್ಲಿ ಪರಿಶೀಲನೆ ನಡೆಸಿ ಕ್ರಿಯಾಯೋಜನೆ ರೂಪಿಸಬೇಕು ಎಂದು ಪಿ.ಜಿ.ವೇಣುಗೋಪಾಲ ಸೂಚಿಸಿದರು. ಇಲಾಖೆ ತಾಂತ್ರಿಕ ಸಹಾಯಕ ನಿರ್ದೇಶಕ ಶಿವಾನಂದ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ತಾಪಂ ಇಒಗಳು ಮತ್ತು ಗ್ರಾಪಂ ಪಿಡಿಒಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts