More

    ಅಗತ್ಯ ವಸ್ತು ಬೆಲೆ ಹೆಚ್ಚಳಕ್ಕೆ ಕಡಿವಾಣ ಹಾಕಿ

    ರಾಯಚೂರು: ಅಡುಗೆ ಅನಿಲ ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಕೊರಳಿಗೆ ತರಕಾರಿ ಹಾರ ಹಾಕಿಕೊಂಡು ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

    ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರು ಸಂಕಷ್ಟ ಎದುರಿಸುವಂತಾಗಿದೆ. ಬಡ ಮತ್ತು ಮಧ್ಯಮ ವರ್ಗದ ಜನರು ಉಪಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ ಎಂದು ದೂರಿದರು.

    ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರಿದೆ. ಕಳೆದ ಎರಡು ವರ್ಷಗಳಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ವಿಪರೀತ ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 60 ರೂ. ಇದ್ದ ಪೆಟ್ರೋಲ್ ಬೆಲೆ ಇಂದು 112 ರೂ.ಗೆ ಏರಿಕೆಯಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ 350 ರೂ. ಇದ್ದದ್ದು 934 ರೂ.ಗೆ ಏರಿಕೆಯಾಗಿದೆ. ದಿನಬಳಕೆ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ವಿದ್ಯುತ್ ದರ ಏರಿಕೆಯ ಬರೆ ಹಾಕಲಾಗಿದೆ. ಸರ್ಕಾರ ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts