More

    ಎಸ್ಸೆಸ್ಸೆಲ್ಸಿ ಎಕ್ಸಾಂಗೆ ಸಕಲ ಸಿದ್ಧತೆ

    ರಾಯಚೂರು: ಜಿಲ್ಲೆಯಾದ್ಯಂತ ಮಾ.31ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 110 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 32,086 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

    ರಾಯಚೂರು ತಾಲೂಕಿನಲ್ಲಿ 31, ಸಿಂಧನೂರಿನಲ್ಲಿ 21, ಮಾನ್ವಿಯಲ್ಲಿ 19, ಲಿಂಗಸುಗೂರು 23, ದೇವದುರ್ಗ ತಾಲೂಕಿನಲ್ಲಿ 16 ಒಟ್ಟು 110 ಪರೀಕ್ಷೆಗಳನ್ನು ಸ್ಥಾಪನೆ ಮಾಡಲಾಗಿದೆ. 16,366 ಬಾಲಕರು, 15,720 ಬಾಲಕಿಯರು ಒಟ್ಟು 32,086 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

    ಪರೀಕ್ಷೆ ಕಾರ್ಯಕ್ಕೆ 110 ಮುಖ್ಯ ಅಧೀಕ್ಷಕರು, 22 ಉಪ ಅಧೀಕ್ಷಕರು, 110 ಸ್ಥಾನಿಕ ಜಾಗೃತ ದಳ ಅಧಿಕಾರಿಗಳು, 110 ಮೊಬೈಲ್ ತನಿಖಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಹಾಗೂ ಸೈಬರ್ ಸೆಂಟರ್‌ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಮೂಲಕ ಅಕ್ರಮ ಜರುಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಕ್ಸಾಂ ಮುಗಿದ ನಂತರ ಪರೀಕ್ಷಾ ಕೇಂದ್ರಗಳಿಂದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಕೇಂದ್ರಗಳಿಗೆ ಸೂಕ್ತ ಭದ್ರತೆಯೊಂದಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ.

    ಪರೀಕ್ಷೆಗಳನ್ನು ವ್ಯವಸ್ಥಿತ ಮತ್ತು ಸುಗಮವಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸುವ ಜತೆಗೆ ಅಹಿತಕರ ಘಟನೆಗಳು ಜರುಗದಂತೆ ಕ್ರಮಕೈಗೊಳ್ಳಲಾಗಿದೆ.

    ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ 110 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 32 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
    ವೃಷಭೇಂದ್ರಯ್ಯಸ್ವಾಮಿ, ಡಿಡಿಪಿಐ, ರಾಯಚೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts