More

    ಮಾಜಿ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಲು ಸಿಪಿಐ (ಎಂ), ಎಸ್‌ಯುಸಿಐ ಪ್ರತಿಭಟನೆ

    ರಾಯಚೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಸಾವಿಗೆ ಕಾರಣವಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದ ಸಿಪಿಐ(ಎಂ) ಹಾಗೂ ಎಸ್‌ಯುಸಿಐ ಕಾರ್ಯಕರ್ತರು, ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿದರು.

    ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿರುವ ಶೇ.40 ಕಮಿಷನ್ ನೀಡುವ ಭ್ರಷ್ಟಾಚಾರ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು.ಬೆಳಗಾವಿ ಜಿಲ್ಲೆ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಮಾಡಿದ 4 ಕೋಟಿ ರೂ. ಮೌಲ್ಯದ ಕಾಮಗಾರಿಯ ಬಿಲ್ ಮಾಡಲು ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಶೇ.40 ಕಮಿಷನ್‌ಗೆ ಒತ್ತಾಯಿಸಿದ್ದರು ಎಂದು ಆರೋಪಿಸಿದ್ದರು. ಬಿಲ್ ಪಾವತಿಯಾಗದ ಕಾರಣ ಸಂತೋಷ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೂ ಇದುವರೆಗೂ ಬಂಧಿಸದೆ ರಕ್ಷಣೆ ನೀಡಲಾಗುತ್ತಿದೆ ಎಂದು ದೂರಿದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಶ್ವರಪ್ಪ ಸಮರ್ಥನೆಗೆ ಹಾಗೂ ರಾಜ್ಯ ಸರ್ಕಾರವೇ ಅವರ ಬೆನ್ನಿಗೆ ನಿಂತಿದೆ. ಕಾರಣ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ಈಶ್ವರಪ್ಪ ಬಂಧನಕ್ಕೆ ಸೂಚನೆ ನೀಡಬೇಕು ಎಂದು ಒತ್ತಾಯಿಸಲಾಯಿತು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಧಿಕಾರಿಗಳಾದ ಡಿ.ಎಸ್.ಶರಣಬಸವ, ರಂಗಪ್ಪ ಯಾಪಲದಿನ್ನಿ, ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಚಂದ್ರಗಿರೀಶ, ಪದಾಧಿಕಾರಿಗಳಾದ ಮಹೇಶ ಚೀಕಲಪರ್ವಿ, ಅಣ್ಣಪ್ಪ, ಎನ್.ಎಸ್.ವೀರೇಶ, ಅಯ್ಯಳಪ್ಪ, ವಿನೋದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts