More

    ಕಲಾವಿದರ ಪ್ರೋತ್ಸಾಹ ಇಂದಿನ ಅಗತ್ಯ; ಮಾಜಿ ಶಾಸಕ ಎ.ಪಾಪಾರೆಡ್ಡಿ ಅಭಿಪ್ರಾಯ

    ಮಹಾಂತಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

    ರಾಯಚೂರು: ಎಲೆಮರೆ ಕಾಯಿಯಂತಿರುವ ಕಲಾವಿದರನ್ನು ಗುರುತಿಸಿ, ಪ್ರೋತ್ಸಾಹಿಸಲು ವೇದಿಕೆ ಕಲ್ಪಿಸುವ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ತಿಳಿಸಿದರು.

    ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಾತೋಶ್ರೀ ಮಹಾಂತಮ್ಮ ಶಿವಬಸಪ್ಪ ಗೋನಾಳ ಪ್ರತಿಷ್ಠಾನ ಭಾನುವಾರ ರಾತ್ರಿ ಏರ್ಪಡಿಸಿದ್ದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿಭಾವಂತ ಕಲಾವಿದರಿದ್ದಾರೆ. ಅವರನ್ನು ಮುಖ್ಯ ವಾಹಿನಿಗೆ ತರಬೇಕು. ಈ ನಿಟ್ಟಿನಲ್ಲಿ ಗೋನಾಳ ಪ್ರತಿಷ್ಠಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು ಎಂದರು.

    ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ.ಎಸ್.ಬಾಲಾಜಿ ಮಾತನಾಡಿ, ಜಾನಪದ ಕಲೆ ಮತ್ತು ಕಲಾವಿದರ ಅಸ್ತಿತ್ವ ಉಳಿಸುವ ಕೆಲಸವನ್ನು ಶರಣಪ್ಪ ಗೋನಾಳ ಮಾಡುತ್ತಿದ್ದಾರೆ. ಕೋವಿಡ್-19 ಕಾರಣದಿಂದ ಜಾನಪದ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಮಹಾಂತಶ್ರೀ, ಮಹಾಂತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ನಂತರ ಕಲಾವಿದರಿಂದ ಜಾನಪದ ಗೀತೆಗಳ ಗಾಯನ ಮತ್ತು ನೃತ್ಯ ಕಾರ್ಯಕ್ರಮ ಜರುಗಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts