More

    ಮುನ್ನೂರುಕಾಪು ಸಮುದಾಯದಿಂದ ದಸರಾ ಮಹೋತ್ಸವ; ಮಾಜಿ ಶಾಸಕ ಎ.ಪಾಪಾರೆಡ್ಡಿ ಮಾಹಿತಿ

    ರಾಯಚೂರು: ನಗರದ ಲಕ್ಷ್ಮಮ್ಮದೇವಿ ಹಾಗೂ ಕಾಳಿಕಾದೇವಿ ದೇವಸ್ಥಾನದಲ್ಲಿ ಮುನ್ನೂರು ಕಾಪು ಸಮುದಾಯದಿಂದ ಸೆ.26 ರಿಂದ ಅ.4ರವರೆಗೆ ದಸರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ತಿಳಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಿತ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅ.5ರಂದು ಮಹಾಪೂಜೆ ಹಾಗೂ ರಥೋತ್ಸವ ಜರುಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೃತ್ಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ 20 ತಂಡಗಳು ನೋಂದಣಿ ಮಾಡಿಸಿಕೊಂಡಿವೆ. ಬಳ್ಳಾರಿ ಧಾರವಾಡದ ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ. ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರಥಮ ಸ್ಥಾನ ಪಡೆದ ತಂಡಗಳಿಗೆ ತಲಾ 75 ಸಾವಿರ ರೂ. ಬಹುಮಾನ ನೀಡಲಾಗುವುದು.

    ಸೆ.26ರಂದು ಸಂಜೆ 6ಕ್ಕೆ ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಿಚ್ಚಾಲಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಮುದಾಯದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ನಿವೃತ್ತ ಮುಖ್ಯ ಶಿಕ್ಷಕ ರಾಮಣ್ಣ ಹವಳೆ ಉಪನ್ಯಾಸ ನೀಡಲಿದ್ದಾರೆ ಎಂದು ಎ.ಪಾಪಾರೆಡ್ಡಿ ತಿಳಿಸಿದರು. ಸಮುದಾಯದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಪದಾಧಿಕಾರಿಗಳಾದ ಬಂಗಿ ನರಸರೆಡ್ಡಿ, ಗುಡ್ಸಿ ನರಸರೆಡ್ಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts