More

    ಇಂಧನ ಬೆಲೆ ಏರಿಕೆ ನೀತಿ ಕೈಬಿಡಿ; ವಿವಿಧ ಪೆಟ್ರೋಲ್ ಬಂಕ್ ಕಾಂಗ್ರೆಸ್‌ ಎದುರು ಪ್ರತಿಭಟನೆ

    ರಾಯಚೂರು: ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ನೀತಿ ಕೈಬಿಡಬೇಕು ಎಂದು ಒತ್ತಾಯಿಸಿ ವಿವಿಧ ಪೆಟ್ರೋಲ್ ಬಂಕ್‌ಗಳ ಎದುರು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ, ಬೆಲೆ ಏರಿಕೆಗೆ ಕಡಿವಾಣ ಹಾಕಲು ಒತ್ತಾಯಿಸಿದರು.

    ನಗರದ ಗೋವಿಂದರಾವ್ ಪೆಟ್ರೋಲ್‌ಬಂಕ್ ಎದುರು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು ನೇತೃತ್ವದಲ್ಲಿ, ಸ್ಟೇಷನ್ ರಸ್ತೆಯಲ್ಲಿರುವ ರಾಘವೇಂದ್ರ ಪೆಟ್ರೋಲ್ ಬಂಕ್ ಎದುರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ, ಬಸವೇಶ್ವರ ವೃತ್ತದಲ್ಲಿನ ಪೆಟ್ರೋಲ್ ಬಂಕ್ ಎದುರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

    ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ವಿಪರೀತ ಏರಿದೆ. ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿವೆ. ಇದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರುತ್ತಿದ್ದು, ಬಡವರು ಜೀವನ ನಡೆಸಲು ಪರದಾಡುವಂತಾಗಿದೆ. ಅಡುಗೆ ಅನಿಲದ ಬೆಲೆಯೂ ಹೆಚ್ಚಿಸಿದ್ದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಪಕ್ಷದ ಮುಖಂಡರಾದ ರವಿ ಬೋಸರಾಜು, ಜಿ.ಬಸವರಾಜ ರೆಡ್ಡಿ, ರಾಮಣ್ಣ ಇರಬಗೇರಾ, ಕೆ.ಶಾಂತಪ್ಪ, ಅಸ್ಲಂ ಪಾಷಾ, ಜಿ.ಶಿವಮೂರ್ತಿ, ಅರುಣ ದೋತರಬಂಡಿ, ಮಲ್ಲಿಕಾರ್ಜುನ ಪಾಟೀಲ್, ನಿರ್ಮಲಾ ಬೆಣ್ಣೆ, ಶಶಿಕಲಾ ಭೀಮರಾಯ, ರಾಣಿ ಸತೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts