More

    ಇಂಧನ ಬೆಲೆ ಹೆಚ್ಚಳಕ್ಕೆ ಆಕ್ರೋಶ

    ರಾಯಚೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐಎಂಎಲ್ ಸೋಮವಾರ ಪ್ರತಿಭಟನೆ ನಡೆಸಿತು.

    ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತ ಕುಮಾರ್‌ಗೆ ಮನವಿ ಸಲ್ಲಿಸಿತು. ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿವೆ. ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದೆ. ಆದರೂ ಇಂಧನ ಬೆಲೆ ಏರಿಸಲಾಗಿದೆ. ಇದರಿಂದ ಬಡವರು ಒದ್ದಾಡುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಬಂಡವಾಳ ಶಾಹಿಗಳಿಗೆ ಪೂರಕ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಕೂಡಲೇ ಇಂಧನ ಬೆಲೆ ಇಳಿಸಬೇಕು. ರೈತರು, ಕಾರ್ಮಿಕರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts