More

    ಪೂರ್ಣ ಪ್ರಮಾಣದ ಪ್ರಗತಿ ಸಾಧಿಸಿ, ಅಧಿಕಾರಿಗಳಿಗೆ ಡಿಸಿ ಚಂದ್ರಶೇಖರ ನಾಯಕ ಸೂಚನೆ

    ರಾಯಚೂರು: ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳಿಗೆ ಬಿಡುಗಡೆಯಾದ ಅನುದಾನ ಹಂಚಿಕೆ ಕುರಿತು ಸೂಕ್ತ ಮಾಹಿತಿ ನೀಡಬೇಕು ಹಾಗೂ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ವರದಿ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಹಂಚಿಕೆ ಹಾಗೂ ಅನುದಾನ ಬಿಡುಗಡೆ ಕುರಿತು ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಭೆಗೂ ಇಲಾಖೆ ಅಧಿಕಾರಿ ಹಾಜರಾಗುವುದಿಲ್ಲ. ಆದ್ದರಿಂದ ಕೂಡಲೇ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗೆ ನೋಟಿಸ್ ನೀಡುವುದಾಗಿ ಎಚ್ಚರಿಸಿದರು.

    ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ನಿಗದಿಯಾದ ಅನುದಾನ, ಬಿಡುಗಡೆಯಾದ ಅನುದಾನ, ಶೇಕಡವಾರು ಹಾಗೂ ಭೌತಿಕ ಗುರಿ ಕುರಿತು ಸರಿಯಾದ ಮಾಹಿತಿ ಒದಗಿಸಬೇಕು. ಪ್ರಸ್ತುತ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.

    ಯೋಜನೆಗಳಿಗೆ ಪೂರ್ಣ ಅನುದಾನ ಬರುವವರೆಗೂ ಕಾಯದೇ ಇದ್ದ ಅನುದಾನದಲ್ಲಿ ಸಾಧ್ಯವಾದಷು ಯೋಜನೆಗಳನ್ನು ಅನುಷ್ಠಾನಗೊಳಿಸಿ ಹೆಚ್ಚುವರಿ ಅನುದಾನ ಬಿಡುಗಡೆಯಾದ ನಂತರ ಉಳಿದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

    ಸಾರ್ವಜನಿಕರು ಇಲಾಖೆಯ ಯೋಜನೆಗಳ ಸೌಲಭ್ಯ ಪಡೆಯಲು ಅಲೆದಾಡುತ್ತಾರೆ. ಆದರೆ ಯೋಜನೆಗಳನ್ನು ಅನುಷ್ಠಾನಗೊಳಿಸದೆ ಅಧಿಕಾರಿಗಳು ವಿಳಂಬ ಮಾಡುವುದು ಸರಿಯಲ್ಲ. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾದಂತೆ ಅಡುಗೆ ಸಹಾಯಕರ ಸಂಖ್ಯೆಯನ್ನೂ ಹೆಚ್ಚಿಸುವುದು ಅವೈಜ್ಞಾನಿಕ.
    | ಎಲ್.ಚಂದ್ರಶೇಖರ ನಾಯಕ, ಜಿಲ್ಲಾಧಿಕಾರಿ

    ಸಭೆಯಲ್ಲಿ ಕಾಟಾಚಾರಕ್ಕಾಗಿ ಯೋಜನೆಗಳ ಅಂಕಿ ಅಂಶದ ಕುರಿತು ಮಾಹಿತಿಯನ್ನು ಕೊಡದೆ ನೈಜ ಮತ್ತು ಸಮರ್ಪಕ ಮಾಹಿತಿಯನ್ನು ನೀಡಬೇಕು. ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಬೇಕು.
    | ಶಶಿಧರ ಕುರೇರ, ಜಿಪಂ ಸಿಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts