More

    ಪದವಿಯ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಿ

    ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಒತ್ತಾಯ

    ರಾಯಚೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ದ್ವಿತೀಯ, ಅಂತಿಮ ವರ್ಷದ ಪದವಿಯ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸಬೇಕೆಂದು ಒತ್ತಾಯಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಎಐಡಿಎಸ್‌ಒ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ವಿದ್ಯಾರ್ಥಿಗಳು ಡಿಸಿ ಕಚೇರಿಯವರೆಗೆ ರ‌್ಯಾಲಿ ನಡೆಸಿ, ಸ್ಥಾನಿಕ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

    ರಾಜ್ಯ ಸರ್ಕಾರ 2019-2020ನೇ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ಸ್ವಾಗತ. ಆದರೆ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸದೆ ಇರುವುದು ಖಂಡನಿಯ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡದೆ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ನೀಡಬೇಕು, ರಾಯಚೂರು ವಿವಿ ಘೋಷಣೆ ಅನುಷ್ಠಾನಕ್ಕೆ ತರಬೇಕು, ಅತಿಥಿ ಉಪನ್ಯಾಸಕರ ವೇತನ ನೀಡಿ, ಕಾಯಂ ಉಪನ್ಯಾಸಕರ ನೇಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

    ಎಐಡಿವೈಒ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ವಿದ್ಯಾರ್ಥಿ ಮುಖಂಡ ಮಲ್ಲನಗೌಡ, ಪೀರಸಾಬ್, ರಮೇಶ್, ಆಂಜನೇಯ ಬಿ.ಗಣೇಕಲ್, ಭದ್ರಿನಾಥ, ಸುದರ್ಶನ್, ಸಣ್ಣ ಈರೇಶ್, ವಿಜಯ್, ರಾಮಲಿಂಗ, ಆನಂದ್, ಹಿಮಬಿಂದು, ಆಸಿಯಾ, ಚೈತ್ರಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts