More

    ಅತಿಥಿ ಉಪನ್ಯಾಸಕರ ವೇತನ ಪಾವತಿ ವಿಳಂಬ ತಪ್ಪಿಸಿ

    ರಾಯಚೂರು: ಸರ್ಕಾರದಿಂದ ಹಣ ಬಿಡುಗಡೆಯಾದರೂ ಕಾಲೇಜು ಪ್ರಾಚಾರ್ಯರಿಂದ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಗೆ ಆಗುತ್ತಿರುವ ವಿಳಂಬವನ್ನು ತಪ್ಪಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಅತಿಥಿ ಉಪನ್ಯಾಸಕ ಸಂಘ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಅಪ್ಪಾಜಿಗೌಡಗೆ ಒತ್ತಾಯಿಸಿದೆ.

    ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜರುಗಿದ ಅತಿಥಿ ಉಪನ್ಯಾಸಕರ ಸಭೆಯಲ್ಲಿ ಮನವಿ ಸಲ್ಲಿಸಿ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದರೂ ಕಾಲೇಜು ಪ್ರಾಚಾರ್ಯ ಬಿಲ್ ಮಾಡುವಲ್ಲಿ ವಿಳಂಬ ಮಾಡುತ್ತಿರುವುದರಿಂದ ಎರಡ್ಮೂರು ತಿಂಗಳಿಗೊಮ್ಮೆ ವೇತನ ಪಾವತಿಯಾಗುತ್ತಿದೆ ಎಂದು ದೂರಿದರು.

    ಎನ್‌ಇಪಿ ಪ್ರಕಾರ ತರಗತಿಗಳನ್ನು ವಿಭಜಿಸಬೇಕಾಗಿದ್ದು, ಅತಿಥಿ ಉಪನ್ಯಾಸಕರು ಕಾಲೇಜಿನಲ್ಲಿ ಕಾರ್ಯನಿರ್ವಹಿಸುವ ಸಮಯದ ಬಗ್ಗೆ ಸ್ಪಷ್ಟತೆ ನೀಡಬೇಕಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಕರ್ತವ್ಯಕ್ಕೆ ಹಾಜರಾದ ಅತಿಥಿ ಉಪನ್ಯಾಸಕರು ಸಮಸ್ಯೆ ಎದುರಿಸುತ್ತಿದ್ದು, ಅದನ್ನು ನಿವಾರಿಸಬೇಕು.

    ಯುಜಿಸಿ ನಿಯಮ ಪ್ರಕಾರ ಎಂಫಿಲ್ ಪದವಿ ಪರಿಗಣಿಸಿ ಅವರಿಗೆ ನ್ಯಾಯಯುತ ವೇತನ ನೀಡಬೇಕು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಅಪ್ಪಾಜಿಗೌಡ ಮನವಿ ಸ್ವೀಕರಿಸಿ ಈ ಬಗ್ಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಇಲಾಖೆ ವಿಶೇಷಾಕಾರಿ ಶ್ರೀಕಾಂತ, ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಸಂಜೀವಕುಮಾರ ಪಟ್ಟಣಕರ್, ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಶ್ರೀನಿವಾಸ ಹೊಸಪೇಟೆ, ಕಾರ್ಯದರ್ಶಿ ಡಾ.ಹನುಮಂತ ಕುರ್ಡಿ, ಪದಾಕಾರಿಗಳಾದ ಈರಣ್ಣ, ಹನುಮಂತ ಚೌಹಾಣ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts