More

    ಗುರ್ಜಾಪುರ ಬ್ಯಾರೇಜ್‌ಗೆ ಮುಳುಗಡೆ ಭೀತಿ; ಮುಳುಗಡೆಗೆ ಒಂದು ಅಡಿ ಮಾತ್ರ ಬಾಕಿ ಗೇಟ್ ತೆರೆದು ನದಿಗೆ ನೀರು

    ರಾಯಚೂರು: ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ನೀರು ಒದಗಿಸುವ ನಿಟ್ಟಿನಲ್ಲಿ ತಾಲೂಕಿನ ಗುರ್ಜಾಪುರ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ ಕಂ ಬ್ರಿಡ್ಜ್ ಮುಳುಗಡೆ ಭೀತಿ ಎದುರಾಗಿದ್ದು, ಸೇತುವೆ ಮುಳುಗಡೆಗೆ ಇನ್ನೂ ಎರಡು ಅಡಿ ಮಾತ್ರ ಬಾಕಿಯಿದೆ.

    ಮಹಾರಾಷ್ಟ್ರದಲ್ಲಿನ ಮಳೆಯಿಂದಾಗಿ ನಾರಾಯಣಪುರ ಜಲಾಶಯದಿಂದ ಪ್ರಸ್ತುತ 1.80 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದ್ದು, ಈಗಾಗಲೇ ಬ್ಯಾರೇಜ್‌ನ ಎಲ್ಲ 194 ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಹೆಚ್ಚಿನ ನೀರು ಹರಿದು ಬರುತ್ತಿದ್ದರಿಂದ ಸೇತುವೆ ಮುಳುಗಡೆ ಸಾಧ್ಯತೆಯುಂಟಾಗಿದೆ.

    ಕಳೆದ ಒಂದು ವರ್ಷದಿಂದ ಬ್ಯಾರೇಜ್‌ನಲ್ಲಿ ನೀರು ನಿಲುಗಡೆ ಮಾಡಲಾಗುತ್ತಿದ್ದು, ಕಳೆದ ವರ್ಷದ ಪ್ರವಾಹದ ಸಂದರ್ಭದಲ್ಲಿ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿತ್ತು. ಜತೆಗೆ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿತ್ತು.

    ರಾಯಚೂರು-ಯಾದಗಿರಿ ಜಿಲ್ಲೆಗಳನ್ನು ಸಂಪರ್ಕಿಸುವಂತೆ ಬ್ಯಾರೇಜ್ ಮೇಲೆ ನಿರ್ಮಾಣ ಮಾಡಲಾಗಿರುವ ಸೇತುವೆ ಮೇಲೆ ಹೆಚ್ಚಿನ ವಾಹನ ಸಂಚಾರ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸೇತುವೆ ಮೇಲೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts