ವಿವಿಗಳ ಆಡಳಿತ ದುರ್ಬಲಗೊಳಿಸುವ ಹುನ್ನಾರ; ಹೈ-ಕ ಹೋರಾಟ ಸಮಿತಿ ಉಪಾಧ್ಯಕ್ಷ ರಜಾಕ್ ಉಸ್ತಾದ್ ಆರೋಪ

ರಾಯಚೂರು: ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳ ಆಡಳಿತ ಹಾಗೂ ಕಾಲೇಜು ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಆರೋಪಿಸಿದರು.

ಸ್ಥಳೀಯ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದ ಎಲ್ಲ ವಿವಿಗಳು ಹಾಗೂ ಕಾಲೇಜುಗಳು ಸ್ನಾತಕ ಕೋರ್ಸ್‌ಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಪ್ರವೇಶಾತಿಗೆ ಸಂಬಂಧಿಸಿದ ವಿವರಗಳನ್ನು ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶದಲ್ಲಿ ನಮೂದಿಸುವುದು ಕಡ್ಡಾಯಗೊಳಿಸಿದೆ. ವಿವಿಗಳು ಸ್ವಾಯತ್ತ ಸಂಸ್ಥೆಗಳಾಗಿದ್ದು, ಪ್ರವೇಶ, ಪರೀಕ್ಷೆ, ಪಠ್ಯಕ್ರಮ, ಫಲಿತಾಂಶ ಹಾಗೂ ಆಡಳಿತ ನಡೆಸುವ ಹಕ್ಕು ಹೊಂದಿವೆ. ಆದರೆ, ತಂತ್ರಾಂಶದ ಮೂಲಕ ವಿವಿಗಳ ಆಡಳಿತವನ್ನು ಕೇಂದ್ರೀಕೃತಗೊಳಿಸಿ ತಮ್ಮ ಅಧೀನಕ್ಕೆ ತೆಗೆದುಕೊಳ್ಳುವ ಹುನ್ನಾರ ಕಂಡು ಬರುತ್ತಿದೆ ಎಂದು ದೂರಿದರು.

ಹಲವು ವಿವಿಗಳು ಪರೀಕ್ಷಾ ವೇಳಾಪಟ್ಟಿ ಬದಲಾವಣೆ ಮಾಡಿ ಪರೀಕ್ಷೆಗಳನ್ನು ಮುಂದೂಡಿವೆ. ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ವಿವರ ಅಪ್‌ಲೋಡ್ ಮಾಡದೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲವೆಂದು ಸರ್ಕಾರ ವಿವಿಗಳಿಗೆ ಸೂಚಿಸಿದೆ. ಆದರೆ, ತಂತ್ರಾಂಶದಲ್ಲಿ ದೋಷವಿದ್ದು, ಅಪ್‌ಲೋಡ್ ಮಾಡಲಾದ ಯಾವುದೇ ಮಾಹಿತಿ ತೆಗೆದುಕೊಳ್ಳುತ್ತಿಲ್ಲ. ಇದರಿಂದಾಗಿ ಉನ್ನತ ಶಿಕ್ಷಣ ಪಡೆಯುತ್ತಿರುವ ಸುಮಾರ ರಾಜ್ಯದ 3800 ಕಾಲೇಜುಗಳು ಹಾಗೂ 24ಕ್ಕೂ ಹೆಚ್ಚು ವಿವಿಗಳ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಪೆಟ್ಟು ಬಿದ್ದಂತಾಗಿದೆ.

ಸೆಮಿಸ್ಟರ್ ಪರೀಕ್ಷೆಯನ್ನು ನಡೆಸದೆ ಮುಂದಿನ ಸೆಮಿಸ್ಟರ್ ತರಗತಿ ನಡೆಸಲು ದಿನಾಂಕ ಘೋಷಿಸಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಕಾರಣ ವಿವಿಗಳು ಪರೀಕ್ಷೆ ನಡೆಸಲು ಅವಕಾಶ ನೀಡಬೇಕು. ತಂತ್ರಾಂಶ ಅಳವಡಿಸುವುದನ್ನು ರದ್ದುಗೊಳಿಸಬೇಕು ಎಂದು ಡಾ.ರಜಾಕ್ ಉಸ್ತಾದ್ ಒತ್ತಾಯಿಸಿದರು. ಪದಾಧಿಕಾರಿಗಳಾದ ರಾಕೇಶ ರಾಜಲಬಂಡಿ, ಥಾಮಸ್ ಬೆಂಜಮಿನ್ ಇದ್ದರು.

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…