ರಾಯಚೂರು: ದೇವಸ್ಥಾನದ ಅರ್ಚಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ತಾಲೂಕಿನ ಡೊಂಗಾ ರಾಂಪೂರು ಗ್ರಾಮದಲ್ಲಿ ಗುರುವಾರ ಜರುಗಿದೆ.
ಡೊಂಗಾ ರಾಂಪೂರು ಗ್ರಾಮದ ಮಂಜುಳಾ(41) ಮೃತ ಮಹಿಳೆ. ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿದ್ದ ಮಂಜುಳಾ ಮಾನಸಿಕ ಅಸ್ವಸ್ಥೆಯಾಗಿದ್ದು, ಒಂದು ವರ್ಷದ ಹಿಂದೆ ಮಹಿಳೆಯ ಪತಿ ತೀರಿಕೊಂಡಿದ್ದ. ಅಂದಿನಿಂದ ಒಬ್ಬಂಟಿಯಾಗಿ ಮನೆಯಲ್ಲಿ ವಾಸವಾಗಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ಯುವಕ ಆತ್ಮಹತ್ಯೆ
ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಮಹಿಳೆಯ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಯಾಪಲದಿನ್ನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.