More

    ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕುವ ಗುರಿ

    ರಾಯಚೂರು: ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಹೇಳಿದರು.

    ನಗರದ ಕೆಇಬಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಕ್ಕಳಿಗೆ ಬೇಕಿರುವ ಲಸಿಕೆಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಲಾಗಿದ್ದು, ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

    ಜಿಲ್ಲೆಯಲ್ಲಿ ಸೋಮವಾರ ಒಟ್ಟು 20 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ವ್ಯಾಕ್ಸಿನ್ ಹಾಕಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಮೊದಲ ಡೋಸ್ ಶೇ.100 ಸಾಧನೆಯಾಗಿದೆ. ಎರಡನೇ ಡೋಸ್ ಕೆಲವೇ ದಿನಗಳಲ್ಲಿ ಶೇ.100 ಗುರಿ ತಲುಪಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts