More

    ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಿ

    ರಾಯಚೂರು: ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಬೇಕು ಹಾಗೂ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆತಿಥಿ ಶಿಕ್ಷಕರ ಸಂಘದ ನಿಯೋಗ ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಸೋಮವಾರ ಮನವಿ ಸಲ್ಲಿಸಿತು.

    ನೇಮಕಗೊಂಡ ಶಿಕ್ಷಕರಿಗೆ ಸರಿಸಮನಾಗಿ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಗೌರವಧನ ಹೆಸರಿನಲ್ಲಿ ಬಿಡಿಗಾಸು ನೀಡಲಾಗುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಪ್ರಸ್ತುತ 32,459 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಗೌರವಧನ ಹೆಚ್ಚಳ ಮಾಡಬೇಕಾಗಿದೆ. ಆಂಧ್ರಪ್ರದೇಶ, ದೆಹಲಿ, ತೆಲಂಗಾಣಗಳಲ್ಲಿ ಅತಿಥಿ ಶಿಕ್ಷಕರಿಗೆ ಮಾಸಿಕ 15 ಸಾವಿರ ರೂ. ವೇತನ ನೀಡಲಾಗುತ್ತಿದೆ. ದೆಹಲಿಯಲ್ಲಿ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲಾಗಿದೆ. ಅತಿಥಿ ಶಿಕ್ಷಕರು ಸಿಗುತ್ತಿರುವ ಗೌರವಧನದಲ್ಲಿ ಕುಟುಂಬ ನಿರ್ವಹಣೆಗೆ ಸಮಸ್ಯೆ ಎದುರಿಸುತ್ತಿದ್ದು, ಗೌರವಧನ ಹೆಚ್ಚಳ ಮಾಡುವುದರ ಜತೆಗೆ ಉದ್ಯೋಗ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ನಿಯೋಗದಲ್ಲಿ ಸಂಘದ ಅಧ್ಯಕ್ಷ ಜಿ.ಕೆ.ನಾಗರಾಜ, ಪದಾಧಿಕಾರಿಗಳಾದ ವಿದ್ಯಾಲಕ್ಷ್ಮೀ, ಚಂದ್ರಕಲಾ, ಮಲ್ಲೇಶ್ವರಿ, ಶರಣಬಸವ, ಮಲ್ಲಿಕಾರ್ಜುನ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts