More

    ದೇಶದಲ್ಲಿ ಅತಿ ಹೆಚ್ಚು ಜನ ಬಳಸುವ ಭಾಷೆ; ಪ್ರಾಚಾರ್ಯ ವೆಂಕಟೇಶ ದೊಡ್ಡಮನಿ ಹೇಳಿಕೆ ಹಿಂದಿ ದಿನಾಚರಣೆ

    ರಾಯಚೂರು: ದೇಶದಲ್ಲಿ ಹಲವಾರು ಭಾಷೆಗಳನ್ನು ಜನರು ಬಳಕೆ ಮಾಡುತ್ತಿದ್ದರೂ ಅತಿಹೆಚ್ಚು ಜನರು ಬಳಕೆ ಮಾಡುವ ಭಾಷೆ ಹಿಂದಿಯಾಗಿದ್ದು, ವಿಶ್ವದಲ್ಲಿ ನಾಲ್ಕನೇ ಅತಿದೊಡ್ಡ ಭಾಷೆಯಾಗಿದೆ ಎಂದು ಸಿಎಂಎನ್ ಪಿಯು ಕಾಲೇಜು ಪ್ರಾಚಾರ್ಯ ವೆಂಕಟೇಶ ದೊಡ್ಡಮನಿ ತಿಳಿಸಿದರು.

    ನಗರದ ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹಿಂದಿ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸರ್ಕಾರ ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಪರಿಗಣಿಸಿದ್ದು, ಮಾತೃ ಭಾಷೆ ಜತೆಗೆ ಹಿಂದಿ, ಇಂಗ್ಲಿಷ್ ಭಾಷೆಯನ್ನು ಕಲಿಯಬೇಕು ಎಂದರು.

    ಉಪ ಪ್ರಾಚಾರ್ಯ ಡಾ.ವೆಂಕಟಪ್ಪ ನಾಯಕ ಮಾತನಾಡಿ, ಹಿಂದಿಯನ್ನು ಮಾತನಾಡುವುದು ಸುಲಭ. ಆದರೆ ಪುಸ್ತಕದ ಭಾಷೆಯಲ್ಲಿ ಮಾತನಾಡುವುದು ಕಷ್ಟಕರ. ಹಿಂದಿ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುವ ನಿಟ್ಟಿನಲ್ಲಿ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

    ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜು ಪ್ರಾಚಾರ್ಯ ಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ಅರುನಾ ಹಿರೇಮಠ ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts