More

    ಹೊರಗುತ್ತಿಗೆ ಕಾರ್ಮಿಕರಿಗೆ ವೇತನ ಪಾವತಿಸಿ; ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಒತ್ತಾಯ

    ಡಿಸಿ ಕಚೇರಿ ಬಳಿ ಪ್ರತಿಭಟನೆ

    ರಾಯಚೂರು: ಜಿಲ್ಲೆಯ ವಿವಿಧ ಇಲಾಖೆಯ ವಸತಿನಿಲಯಗಳಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ವೇತನ ಪಾವತಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.

    ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಮಹ್ಮದ್ ಆಸೀಫ್ ಮನವಿ ಸಲ್ಲಿಸಿತು. ಲಾಕ್‌ಡೌನ್ ಅವಧಿಯಲ್ಲಿ ಅಡುಗೆ ಸಿಬ್ಬಂದಿ ಮತ್ತು ಕಾವಲುಗಾರರು ಕೆಲಸ ಮಾಡಿದ್ದರೂ ಇದುವರೆಗೂ ವೇತನ ಪಾವತಿಸಲಾಗಿಲ್ಲ. ಹೊರಗುತ್ತಿಗೆ ಕಾರ್ಮಿಕರು ಕನಿಷ್ಠ ಕೂಲಿ ಪಡೆದು ಕಾರ್ಯನಿರ್ವಹಿಸುತ್ತಿದ್ದು, ಆಗಸ್ಟ್ ನಿಂದ ಇದುವರೆಗೂ ವೇತನ ಪಾವತಿಸಿಲ್ಲ. ಕಾರ್ಮಿಕರು ರಜೆಯಿಲ್ಲದೆ, ಸಾರ್ವತ್ರಿಕ ರಜೆ ದಿನಗಳಂದು ಕಾರ್ಯನಿರ್ವಹಿಸಿದ್ದಾರೆ. ಆದರೆ, ಅವರಿಗೆ ಭತ್ಯೆಯನ್ನು ನೀಡಲಾಗಿಲ್ಲ.

    ಕಾರ್ಮಿಕರಿಗೆ ಸಮವಸ್ತ್ರ ನೀಡಬೇಕು. ಪಿಎಫ್, ಇಎಸ್‌ಐ ವಂತಿಗೆ ಪಾವತಿಸಿದ ಬಗ್ಗೆ ಮಾಹಿತಿ ನೀಡಬೇಕು. ಕಾರ್ಮಿಕರಿಗೆ ವಾರದ ರಜೆ, ಸಾರ್ವತ್ರಿಕ ರಜೆಗಳಂದು ಕೆಲಸ ಮಾಡಿದ್ದಕ್ಕೆ ಎರಡು ಪಟ್ಟು ವೇತನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ, ಕಾರ್ಯದರ್ಶಿ ಉಮಾ, ಪದಾಧಿಕಾರಿಗಳಾದ ಎನ್.ಎಸ್.ವಿರೇಶ, ಸುಲೋಚನಾ, ಸಾಬೇರಾ, ಶಾಂತಾ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts