ಸಮಾನತೆಯೇ ನಿಜವಾದ ಸ್ವಾತಂತ್ರ್ಯ: ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಅಭಿಪ್ರಾಯ

Raichur flaghosting
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಗೀತೆಗೆ ಗೌರವ ಸಮನ ಸಲ್ಲಿಸುತ್ತಿರುವುದು. ಡಿಸಿ ಕೆ.ನಿತೀಶ್, ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಎಸ್‌ಪಿ ಎಂ.ಪುಟ್ಟಮಾದಯ್ಯ, ಎಎಸ್‌ಪಿ ಶಿವಕುಮಾರ್ ಇದ್ದರು.
Published on

ರಾಯಚೂರು: ದೇಶದ ಕಟ್ಟ ಕಡೆಯ ಮನುಷ್ಯನ ಸ್ವಾಭಿಮಾನದ ಬದುಕು ಕಟ್ಟಿಕೊಡುವುದೇ ಪ್ರಜಾಪ್ರಭುತ್ವದ ಮುಖ್ಯ ಗುರಿಯಾಗಿದ್ದು, ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಾಕಾಶ ಪಾಟೀಲ್ ಹೇಳಿದರು.

ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗುರುವಾರ ಮಾತನಾಡಿದರು.

ಸತ್ಯ ಮತ್ತು ಅಹಿಂಸೆಯ ಮಾರ್ಗದಿಂದ ಸ್ವಾತಂತ್ರ್ಯವನ್ನು ದೊರಕಿಸಿಕೊಡುವ ಮೂಲಕ ಮಹಾತ್ಮಗಾಂಧೀಜಿ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬರಿಗೂ ಎಲ್ಲ ವಲಯಗಳಲ್ಲಿಯೂ ಸಮಾನ ಅವಕಾಶ ಸಿಗಬೇಕು. ಮತ್ತು ದೇಶದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗೆ ಶ್ರಮಿಸುವುದು ದೇಶದ ಆಡಳಿತದಲ್ಲಿರುವ ಸರ್ಕಾರಗಳ ಹಾಗೂ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದರು.

ನೆಲದ ಕಾನೂನು ಗೌರವಿಸುವುದು, ಮೇಲು ಕೀಳು ಭಾವನೆಯನ್ನು ತೆಗೆದುಹಾಕುವುದು ಹಾಗೂ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣುವುದೇ ನಿಜವಾದ ಸ್ವಾತಂತ್ರ್ಯವಾಗಿದೆ ಮತ್ತು ಇದರಿಂದ ದೇಶದಲ್ಲಿ ಸಮೃದ್ಧಿ ಸಾಧ್ಯವಾಗುತ್ತದೆ. ದೇಶದ ಪ್ರಗತಿ, ಅಭಿವೃದ್ಧಿ ವಿಚಾರದಲ್ಲಿ ಆಡಳಿತದಲ್ಲಿರುವ ಸರ್ಕಾರಗಳು, ಅಧಿಕಾರಿಗಳ ಜತೆಗೆ ಜನರು ಜಾಗೃತರಾದಾಗ ದೇಶದ ವ್ಯವಸ್ಥೆ ಸರಿಯಾಗಿರುತ್ತದೆ ಎಂದು ತಿಳಿಸಿದರು.

ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತೆರದ ವಾಹನದಲ್ಲಿ ಪಥಸಂಚಲನದ ತಂಡಗಳ ಪರಿವೀಕ್ಷಣೆ ಮಾಡುತ್ತಿರುವುದು.
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತೆರದ ವಾಹನದಲ್ಲಿ ಪಥಸಂಚಲನದ ತಂಡಗಳ ಪರಿವೀಕ್ಷಣೆ ಮಾಡುತ್ತಿರುವುದು.

ನ್ಯಾಯಾಂಗ, ಕಾಯಾರ್ಂಗ, ಶಾಸಕಾಂಗದ ಮೇಲೆ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ನಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪ್ರಮಾಣಿಕ ಮತ್ತು ನಿಸ್ವಾರ್ಥ ಭಾವದಿಂದ ಜನಸೇವೆ ಮಾಡಬೇಕು. ಜಿಲ್ಲೆಯಲ್ಲಿ ಪಾರದರ್ಶಕ, ಭ್ರಷ್ಟಾಚಾರರಹಿತ ಹಾಗೂ ಜನಸ್ನೇಹಿ ಆಡಳಿತ ಕೊಡಲು ಅಧಿಕಾರಿಗಳು ಮುಂದಾಗಬೇಕು ಜತೆಗೆ ಸತ್ಯ ಹಾಗೂ ನ್ಯಾಯಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮತಗಳಿಗಾಗಿ ಕೊಟ್ಟಿಲ್ಲ. ರಾಜ್ಯದ ಶಕ್ತಿಹೀನರಿಗೆ, ಬಡವರ ನೆರವಿಗೆ ಐದು ಗ್ಯಾರಂಟಿಗಳನ್ನು ಲೋಕಾರ್ಪಣೆ ಮಾಡುವ ಮೂಲಕ ಬಡವರಿಗೆ ಸರ್ಕಾರದ ಒಂದು ಸಿಂಹಪಾಲು ತಲುಪಿಸಲಾಗಿದೆ. ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಕಾರದ ಗ್ಯಾರಂಟಿ ಯೋಜನೆಗಳ ಜನರ ಮನೆ ಬಾಗಿಲಿಗೆ ಮುಟ್ಟಿಸಬೇಕು ಎಂದು ತಿಳಿಸಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಯಾಗಬೇಕೆಂದು ನಿರಂತರವಾಗಿ ಹೋರಾಟ ನಡೆಯುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದಿಂದ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಮತ್ತು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಏರ್ ಪೋರ್ಟ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ ಕರ್ನಾಟಕದ ಹಾಗೂ ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರಮುಖ ಆಧ್ಯತೆ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕ ಬಸನಗೌಡ ದದ್ದಲ, ವಿಧಾನ ಪರಿಷತ್ ಸದಸ್ಯ ಎ.ವಸಂತ್‌ಕುಮಾರ್, ಆರ್‌ಎಪಿಎಂಪಿಸಿಎಸ್ ಅಧ್ಯಕ್ಷ ಜಯಂತರಾವ್ ಪತಂಗೆ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಸೀರ್ ಅಹ್ಮದ್, ಜಿಲ್ಲಾಧಿಕಾರಿ ಕೆ.ನಿತೀಶ್, ಜಿ.ಪಂ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಎಸ್‌ಪಿ ಎಂ.ಪುಟ್ಟಮಾದಯ್ಯ, ಎಡಿಸಿ ಶಿವಪ್ಪ ಯಲ್ಲಪ್ಪ ಭಜಂತ್ರಿ, ಎಸಿ ಮಹೆಬೂಬಿ, ಎಎಸ್‌ಪಿ ಶಿವಕುಮಾರ್, ರಾಯಚೂರು ತಹಸೀಲ್ದಾರ್ ಸುರೇಶ ವರ್ಮಾ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net