ರಾಯಚೂರು: ಸ್ವಾತಂತ್ರೃ ದಿನವನ್ನು ಆ.15ರಂದು ಅರ್ಥಪೂರ್ಣವಾಗಿ ಆಚರಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಪ್ಪ ಯಲ್ಲಪ್ಪ ಭಜಂತ್ರಿ ಅಧಿಕಾರಿಗಳಿಗೆ ಸೂಚನೆ ನಿಡಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ
ಜಿಲ್ಲಾಡಳಿತದಿಂದ ಆ.15ರಂದು ಸಂಭ್ರಮದಿಂದ ಆಚರಿಸಲಾಗುವ ಸ್ವಾತಂತ್ರೃ ದಿನದ ಕಾರ್ಯಕ್ರಮದಲ್ಲಿ ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಧ್ವಜಾರೋಹಣ ಕಾರ್ಯಕ್ರಮದ ದಿನದಂದು ಕ್ರೀಡಾಂಗಣದ ಸುತ್ತಲೂ ಸ್ವಚ್ಛತೆ ಮಾಡಬೇಕು ಮತ್ತು ಕಾರ್ಯಕ್ರಮದ ನಂತರವೂ ಕ್ರೀಡಾಂಗಣ ಸ್ವಚ್ಛತೆಗೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳಬೇಕು ಜತೆಗೆ ವ್ಯದ್ಯಕೀಯ ಸೇವೆಯನ್ನು ಆರೋಗ್ಯ ಇಲಾಖೆಯಿಂದ ಒದಗಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ರಾಮಕೃಷ್ಣ ಆಶ್ರಮದಲ್ಲಿ ಬಾಲಕನ ಮೇಲೆ ಸ್ವಾಮೀಜಿ ಹಲ್ಲೆ: ಬಂಧನ
ಈ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರೃ ಹೋರಾಟಗಾರ ಹಂಪಣ್ಣ, ತಹಸೀಲ್ದಾರ್ ಸುರೇಶ ವರ್ಮಾ, ನಗರಾಭಿವೃದ್ಧಿ ಕೋಶದ ಪಿಡಿ ಜಗದೀಶ ಗಂಗಣ್ಣನವರ್, ಪಶು ಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಕೋಲ್ಕರ್, ನಗರಸಬೆ ಪೌರಾಯುಕ್ತ ಗುರುಸಿದ್ದಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಜಿಲ್ಲಾ ಕಾರ್ಮಿಕಾಧಿಕಾರಿ ಆರತಿ ಸೇರಿದಂತೆ ಇತರರಿದ್ದರು.