More

    ಭಾರತ ಬಂದ್‌ಗೆ ರಾಯಚೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

    ರಾಯಚೂರು: ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜಿಲ್ಲಾ ಕೇಂದ್ರ ಸೇರಿ ಇತರೆಡೆ ನಡೆದ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು ಬೆಂಬಲಿಸಿದರು.

    ನಗರದಲ್ಲಿ ರೈತ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಬೈಕ್ ರ‌್ಯಾಲಿ ನಡೆಸುವ ಮೂಲಕ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮಾಲೀಕರು ಅಂಗಡಿಗಳನ್ನು ಮುಚ್ಚಿ ನಂತರ ಪ್ರತಿಭಟನೆಕಾರರು ಹೋದಾಗ ಅಂಗಡಿಗಳನ್ನು ತೆರೆದು ವಹಿವಾಟು ಆರಂಭಿಸಿದರು.

    ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸುವ ಮೂಲಕ ರೈತರು ಮತ್ತು ಕಾರ್ಮಿಕರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಲಾಯಿತು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಲಾಯಿತು.

    ವಿವಿಧ ಸಂಘಟನೆಗಳ ಮುಖಂಡರಾದ ಡಿ.ಎಸ್.ಶರಣಬಸವ, ಕೆ.ಜಿ.ವೀರೇಶ, ಕರಿಯಪ್ಪ ಅಚ್ಚೊಳ್ಳಿ, ಎನ್.ಎಸ್.ವೀರೇಶ, ಜಿ.ಅಮರೇಶ, ಶರಣಪ್ಪ ಮರಳಿ, ಜಂಬನಗೌಡ, ಮಾರೆಪ್ಪ ಹರವಿ, ಎಚ್.ಪದ್ಮಾ, ರೂಪಾ ನಾಯಕ, ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು, ನಗರಸಭೆ ಸದಸ್ಯರಾದ ಜಯಣ್ಣ, ಬಿ.ರಮೇಶ, ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ಜಿ.ಶಿವಮೂರ್ತಿ, ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts