More

    ಬೌದ್ಧಿಕ ಸಂಪತ್ತು ವೃದ್ಧಿಸಿಕೊಳ್ಳಲು ಆರೋಗ್ಯ ವಿವಿ ವಿಶ್ರಾಂತ ನಿರ್ದೇಶಕ ಡಾ.ಕೆ.ಪಿಪುತ್ತೂರಾಯ ಸಲಹೆ

    ರಾಯಚೂರು: ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ಎಂಬುದು ಉದ್ಯೋಗ ಪಡೆಯುವ ಮಾರ್ಗವಾಗಿದ್ದು, ಉದ್ಯೋಗಕ್ಕಾಗಿ ಕಲಿಕೆಯುವುದರಿಂದ ಪ್ರಪಂಚದ ಅರಿವು ಸಿಗಲು ಸಾಧ್ಯವಿಲ್ಲ ಎಂದು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ವಿಶ್ರಾಂತ ನಿರ್ದೇಶಕ ಡಾ.ಕೆ.ಪಿಪುತ್ತೂರಾಯ ಹೇಳಿದರು.

    ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಯ 14ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ವ್ಯಾಸಂಗ ಮಾಡುತ್ತಿರುವವರು ಪ್ರತಿಭೆಯನ್ನು ಸ್ವತ್ತಾಗಿಸಿಕೊಂಡು, ಬೌದ್ಧಿಕ ಸಂಪತ್ತು ವೃದ್ಧಿಸಿಕೊಳ್ಳಲು ಮುಂದಾಗಬೇಕು ಎಂದರು.

    ಬೋಧಕ ವರ್ಗ ಕಲಿಸುವ ಆಸಕ್ತಿ, ಬದ್ಧತೆಯನ್ನು ತೋರಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ದೂರದೃಷ್ಟಿಯ ಆಲೋಚನೆಯನ್ನು ಹೊಂದಿರಬೇಕು. ಆಗ ವಿದ್ಯಾರ್ಥಿಗಳು ಜ್ಞಾನವಂತರಾಗಿ ವಿವಿಯಿಂದ ಹೊರಬರಲು ಸಾಧ್ಯವಾಗಲಿದೆ. ದೇಶದ ಸಂಸ್ಕೃತಿ, ಸಂಸ್ಕಾರ ಗೌರವಿಸುವ ಗುಣ ಇದ್ದಾಗ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ. ಜ್ಞಾನದ ಹಸಿವು, ಆತ್ಮವಿಶ್ವಾಸ, ನೈತಿಕ ಮೌಲ್ಯಗಳ ಜತೆಗೆ ಪಾಲಕರ ಕನಸನ್ನು ನನಸಾಗಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿರಬೇಕು ಎಂದು ಡಾ.ಕೆ.ಪಿ.ಪುತ್ತೂರಾಯ ಹೇಳಿದರು.

    ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯ ತ್ರಿವಿಕ್ರಮ ಜೋಷಿ ಮಾತನಾಡಿ, ವಿವಿ ಕಳೆದ 14 ವರ್ಷಗಳಿಂದ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ವಿವಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದರು. ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಎಂ.ಜಿ.ಪಾಟೀಲ್, ಡಾ.ಎಂ.ಕೆ.ನಾಯಕ, ಡಾ.ವೀರನಗೌಡ , ಡಾ.ನೇಮಿಚಂದ್ರಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts