ಬಿಸಿಯೂಟ ಸವಿದ ಐಪಿಎಸ್ ಅಧಿಕಾರಿ

Latest News

ಮಿನಿ ಕವಿಯ ಪರ್ಸಿನಲ್ಲಿ ಮನಿ ಇರುವುದಿಲ್ಲ

ಕಳ್ಳ!: ಇದು ಎರಡೇ ಅಕ್ಷರದ ಪದ. ಆದರೂ ಇದು ಮೂಡಿಸುವ ಸಂಚಲನ ಅಷ್ಟಿಷ್ಟಲ್ಲ. ಬೇಕಿದ್ದರೆ ನೀವೇ ಪರೀಕ್ಷಿಸಬಹುದು. ನಾಲ್ಕು ಜನ ಸ್ನೇಹಿತರು ಮಾತನಾಡುತ್ತ...

ಸಚಿನ್ ಜೀವನದ ಘಟನೆಗಳ ಅನಾವರಣ

ವಿಶ್ವ ಕ್ರಿಕೆಟ್​ನಲ್ಲಿ ಸಚಿನ್ ತೆಂಡುಲ್ಕರ್ ಎಂಬ ಹೆಸರು ಇಂದಿಗೂ ಬಹುದೊಡ್ಡ ಬ್ರಾ್ಯಂಡ್. ನಿರಂತರವಾಗಿ 24 ವರ್ಷ (1989-2013) ಭಾರತಿಯ ಕ್ರಿಕೆಟ್​ನ ಮಹಾರಾಜನಂತೆ ಕಂಗೊಳಿಸಿದ...

ವಿಜಯವಾಣಿ ಸಿನಿಮಾ ವಿಮರ್ಶೆ: ಬದುಕೇ ಕ್ಲಾಸ್, ಗಣಿ ಪಾಸ್

ಅವಮಾನ.. ಅವಮಾನ.. ಅವಮಾನ... ಹೀಗೆ ಹೆಜ್ಜೆ ಹೆಜ್ಜೆಗೆ ಅವಮಾನ ಎದುರಿಸಿದ ವ್ಯಕ್ತಿಗೆ ಕೊನೆಗೆ ಅದೇ ಅವಮಾನ ವರಮಾನ-ಸನ್ಮಾನವಾಗಿ ಪರಿಣಮಿಸುವುದೇ ‘ನಮ್ ಗಣಿ ಬಿಕಾಂ...

ಹೆಸರು ಬದಲಿಸಿಕೊಂಡ ಕೇಜಿಸ್ಟಾರ್​ ರವಿಚಂದ್ರನ್ ಪುತ್ರ ಮನೋರಂಜನ್!

ಬೆಂಗಳೂರು: ಕನ್ನಡ ಚಿತ್ರರಂಗದ ‘ಕನಸುಗಾರ’ ರವಿಚಂದ್ರನ್ ಅವರ ಪುತ್ರ ಈಗ ‘ಪ್ರಾರಂಭ’ದಿಂದಲೇ ‘ಒ’ ಅಲ್ಲ ‘ಯು’ ಎಂದಿದ್ದಾರೆ. ಅಷ್ಟಕ್ಕೂ ಅವರು ಹೀಗೆನ್ನಲು ಕಾರಣ...

ಜೆಡಿಎಸ್ ರಣಕಲಿಗಳ ಪಟ್ಟಿ ಸಿದ್ಧ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕಾಂತರಾಜು ಅವರ ಹೆಸರನ್ನು ಜೆಡಿಎಸ್ ಅಂತಿಮಗೊಳಿಸಿದೆ. ಮೈತ್ರಿ...
ಕೊಪ್ಪರ ಮತಗಟ್ಟೆಗೆ ಭೇಟಿ, ಪರಿಶೀಲನೆ | ಮಕ್ಕಳ ಜತೆ ಬೆರತು ಊಟ ಸವಿದ ಅಧಿಕಾರಿ ನಿಖಿಲ್ ಬುಳ್ಳಾವರ್

ರಾಯಚೂರು: ಐಎಎಸ್, ಐಪಿಎಸ್ ಅಧಿಕಾರಿಗಳೆಂದರೆ ಸಾಮಾನ್ಯ ಜನರೊಂದಿಗೆ ಬೆರೆಯುವುದಿಲ್ಲ. ಅವರಿಗೆ ವಿಶೇಷ ಆತಿಥ್ಯವೇ ಬೇಕು ಎನ್ನುವ ಮನೋಭಾವ ಜನರಲ್ಲಿದೆ. ಆದರೆ, ಪ್ರೊಬೇಷನರಿ ಐಪಿಎಸ್ ಅಧಿಕಾರಿಯೊಬ್ಬರು ಮಕ್ಕಳೊಂದಿಗೆ ಬೆರತು ಬಿಸಿಯೂಟ ಸವಿಯುವ ಮೂಲಕ ಸರಳತೆ ಮೆರೆದಿದ್ದಾರೆ.

ಚಿತ್ರದುರ್ಗ ಮೂಲದ ಐಪಿಎಸ್ ಅಧಿಕಾರಿ ನಿಖಿಲ್ ಬುಳ್ಳಾವರ್ ರಾಯಚೂರು ಜಿಲ್ಲೆಗೆ ಪ್ರೊಬೇಷನರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಂದಿದ್ದು, ಲೋಕಸಭೆ ಚುನಾವಣೆ ಕಾರ್ಯ ನಿಮಿತ್ತ ಜಿಲ್ಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿಯ ಭದ್ರತೆ ವ್ಯವಸ್ಥೆ ಪರಿಶೀಲಿಸುತ್ತಿದ್ದಾರೆ.

ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಪರಿಶೀಲನೆಗೆ ತೆರಳಿದ ಸಂದರ್ಭ ಅಲ್ಲಿನ ಶಾಲೆ ಮಕ್ಕಳೊಂದಿಗೆ ಬೆರೆತು ಅವರೊಂದಿಗೆ ಬಿಸಿಯೂಟ ಸವಿಯುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು.

ಕೊಪ್ಪರ ಗ್ರಾಮದ ಮತಗಟ್ಟೆಯನ್ನು ಅತೀ ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದ್ದು, ಮತಗಟ್ಟೆ ಕುರಿತು ಮಾಹಿತಿ ಸಂಗ್ರಹ ಮತ್ತು ಕೈಗೊಳ್ಳಬೇಕಾದ ಭದ್ರತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆ ನಡೆಯುತ್ತಿರುವಾಗ ಆಗಮಿಸಿದ ಪೊಲೀಸ್ ಅಧಿಕಾರಿ ಬಗ್ಗೆ ವಿದ್ಯಾರ್ಥಿಗಳು ಕುತೂಹಲ ವ್ಯಕ್ತಪಡಿಸಿದಾಗ ನಿಖಿಲ್ ಬುಳ್ಳಾವರ್ ಮಕ್ಕಳೊಂದಿಗೆ ಬೆರೆತು ಮಾತುಕತೆ ನಡೆಸಿದರು.

ಪೊಲೀಸ್ ಅಧಿಕಾರಿ ಕಂಡು ಮೊದಲು ವಿದ್ಯಾರ್ಥಿಗಳು ಆತಂಕಪಟ್ಟರು. ನಂತರ ಅಧಿಕಾರಿಯ ಸರಳತೆ ಕಂಡು ಮಾತುಕತೆ ಮುಂದಾದಾಗ ಪೊಲೀಸ್ ಇಲಾಖೆಯ ಕಾರ್ಯವೈಖರಿ, ಐಪಿಎಸ್‌ಗೆ ಹೇಗೆ ಅಧ್ಯಯನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಂತರ ವಿದ್ಯಾರ್ಥಿಗಳು ಬಿಸಿಯೂಟ ಮಾಡಲು ಕುಳಿತಾಗ ಅವರೊಂದಿಗೆ ಕುಳಿತು ಶಾಲೆಯಲ್ಲಿ ಸಿದ್ಧಪಡಿಸಿದ ಬಿಸಿಯೂಟ ಸವಿದರು. ಶಿಕ್ಷಕರು ಹಾಗೂ ಜತೆಯಲ್ಲಿದ್ದ ಅಧಿಕಾರಿಗಳು ವಿಶೇಷ ವ್ಯವಸ್ಥೆ ಕಲ್ಪಿಸಲು ಮುಂದಾದರೂ ನಿರಾಕರಿಸಿ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮತಗಟ್ಟೆ ಪರಿಶೀಲನೆಗೆ ತೆರಳಿದ್ದೆ. ಶಾಲೆ ನಡೆಯುತ್ತಿದ್ದರಿಂದ ಮಕ್ಕಳೊಂದಿಗೆ ಬೆರೆತು ಬಿಸಿಯೂಟ ಸವಿದು ಬಂದಿದ್ದೇನೆ. ಮಕ್ಕಳೊಂದಿಗೆ ಬೆರೆಯುವ ಹಾಗೂ ಅವರೊಂದಿಗೆ ಚರ್ಚಿಸುವುದು ಖುಷಿ ನೀಡುವ ವಿಚಾರ.
| ನಿಖಿಲ್ ಬುಳ್ಳಾವರ್, ಪ್ರೊಬೇಷನರಿ ಐಪಿಎಸ್ ಅಧಿಕಾರಿ, ರಾಯಚೂರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....