More

    ನೀರಾವರಿ ಯೋಜನೆ ಪೂರ್ಣಗೊಳಿಸುವ ಸಂಕಲ್ಪ

    ರಾಯಚೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆ ಬಂದಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.

    ಜಿಲ್ಲಾ ಕ್ರೀಡಾಂಗಣದ ಹತ್ತಿರ ಜನತಾ ಜಲಧಾರೆ ಯಾತ್ರೆ ನಿಮಿತ್ತ ಸೋಮವಾರ ರಾತ್ರಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿನ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸುವ ಸಂಕಲ್ಪ ಮಾಡಿದ್ದಾರೆ. ಈ ಹಿಂದೆ ಕುಮಾರಸ್ವಾಮಿ, ಕೊಟ್ಟ ಮಾತಿನಂತೆ ರೈತರ ಸಾಲ ಮನ್ನಾ ಮಾಡಿದ್ದರು. ಈಗ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಶಪಥದೊಂದಿಗೆ ಜನತಾ ಜಲಧಾರೆ ಯಾತ್ರೆ ನಡೆಸಲಾಗುತ್ತಿದೆ. ರೈತರ ಹಿತ ಕಾಪಾಡಲು ಪಕ್ಷ ಬದ್ಧವಾಗಿದೆ ಎಂದು ಹೇಳಿದರು.

    ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎನ್‌ಆರ್‌ಬಿಸಿ ಸೇರಿ ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಯಾತ್ರೆಯ ಯಶಸ್ಸು ಸಹಿಸದೆ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು. ಕಾಂಗ್ರೆಸ್, ಬಿಜೆಪಿಗೆ ರೈತರ ಅಭಿವೃದ್ಧಿ ಬೇಕಾಗಿಲ್ಲ. ಕ್ಷುಲ್ಲಕ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿವೆ ಎಂದು ಹೇಳಿದರು.

    ಇದಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಸಂಚರಿಸಿತು. ಪದಾಧಿಕಾರಿಗಳಾದ ಮಹಾಂತೇಶ ಪಾಟೀಲ್ ಅತ್ತನೂರು, ರವಿ ಪಾಟೀಲ್, ಎನ್.ಶಿವಶಂಕರ, ಯುಸೂಫ್ ಖಾನ್, ರಾಮನಗೌಡ, ಕರೆಮ್ಮ ನಾಯಕ, ದಾನಪ್ಪ ಯಾದವ, ಲಕ್ಷ್ಮೀಪತಿ, ಬಿ.ತಿಮ್ಮಾರೆಡ್ಡಿ, ಪವನಕುಮಾರ, ಬುಡ್ಡನಗೌಡ, ಮಲ್ಲಿಕಾರ್ಜುನ ದೋತರಬಂಡಿ, ವಿಶ್ವನಾಥ ಪಟ್ಟಿ, ಅಕ್ಬರ್ ಹುಸೇನ್ ನಾಗುಂಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts