More

    ನಮ್ಮ ಭಾಗದ ಸಮಸ್ಯೆಗಳಿಗೆ ಧ್ವನಿಯಾಗುವೆ- ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಹೇಳಿಕೆ

    ರಾಯಚೂರು: ರಾಜ್ಯಸಭಾ ಸದಸ್ಯ ಅವಧಿಯ ಪ್ರತಿಕ್ಷಣವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ನಮ್ಮ ಭಾಗದ ಸಮಸ್ಯೆಗಳಿಗೆ ರಾಜ್ಯಸಭೆಯಲ್ಲಿ ಧ್ವನಿಯಾಗುವ ಕೆಲಸ ಮಾಡುತ್ತೇನೆ ಎಂದು ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ತಿಳಿಸಿದರು.

    ಸ್ಥಳೀಯ ವಿಜಯವಾಣಿ, ದಿಗ್ವಿಜಯ ನ್ಯೂಸ್ ಕಚೇರಿಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ತಮ್ಮ ಆಲೋಚನೆ, ಮುಂದಿನ ಕಾರ್ಯಸೂಚಿ ಹಂಚಿಕೊಂಡು, ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ರಾಜ್ಯದ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಲಾಗುವುದು ಎಂದರು.

    30 ವರ್ಷದಿಂದ ಜನರ ಮಧ್ಯೆ ಕೆಲಸ ಮಾಡಿರುವುದರಿಂದ ಈ ಭಾಗದ ಸಮಸ್ಯೆಗಳ ಅರಿವಿದೆ. ಪ್ರಮುಖವಾಗಿ ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆ ನಿಟ್ಟಿನಲ್ಲಿ ಐಐಐಟಿಯನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಪ್ರಯತ್ನ ನಡೆಸಲಾಗುತ್ತಿದೆ. ಅದಕ್ಕೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಲು ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು.

    ನನೆಗುದಿಗೆ ಬಿದ್ದಿರುವ ಮಹೆಬೂಬ್‌ನಗರ-ಗಿಣಿಗೇರಾ, ಗದಗ-ವಾಡಿ ರೈಲು ಮಾರ್ಗಗಳ ನಿರ್ಮಾಣ ಕಾಮಗಾರಿಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗುವುದು. ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳನ್ನು ಒಗ್ಗೂಡಿಸಿ ರೈಲ್ವೆ ವಲಯ ರಚಿಸುವಂತೆ ಒತ್ತಾಯಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts