More

    ಜೈನಮುನಿಯ ಹತ್ಯೆ ದೇಶಕ್ಕೇ ಅಪಮಾನ


    ರಾಯಚೂರು: ಬೆಳಗಾವಿ ಜಿಲ್ಲೆ ಹಿರೇಕೋಡಿ ಗ್ರಾಮದಲ್ಲಿನ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಐಬಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜೈನ್ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಹತ್ಯೆಯ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದೇಶದಲ್ಲಿ ದಿಗಂಬರ ಜೈನಮುನಿಗಳ ಸಂಖ್ಯೆ ಬಹಳ ವಿರಳವಾಗಿದ್ದು, ಮುನಿಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿರುವುದು ದೇಶಕ್ಕೆ ದೊಡ್ಡ ಅಪಮಾನವಾಗಿದೆ. ಜೈನಮುನಿಯ ಹತ್ಯೆ ನಡೆದಿರುವುದು ದೇಶದಲ್ಲಿ ಪ್ರಥಮವಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ರಾಜ್ಯದಲ್ಲಿ ವಾಸವಾಗಿರುವ ಮತ್ತು ಸಂಚರಿಸುವ ದಿಗಂಬರ ಮುನಿಗಳಿಗೆ ಪೊಲೀಸ್ ಭದ್ರತೆ ಕಲ್ಪಿಸಬೇಕು. ಈ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts