ನದಿಗೆ ಹಾರಿ ಯುವಕ ಆತ್ಮಹತ್ಯೆ

ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ಕೃಷ್ಣಾ ನದಿ ಸೇತುವೆ ಮೇಲಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೀಮರಾಯ (22) ಮೃತ. ಗೃಹರಕ್ಷಕ ದಳದಲ್ಲಿ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ. ಶನಿವಾರ ತಡರಾತ್ರಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಪ್ರೀತಿಯ ವೈಫಲ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಕ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.