More

    ವಸತಿ ನಿಲಯಗಳ ದಿನಗೂಲಿ ನೌಕರರಿಗೆ ಕೆಲಸ ನೀಡಿ; ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ

    ರಾಯಚೂರು: ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗೆ ಸೇರಿದ ವಸತಿ ನಿಲಯಗಳಲ್ಲಿ ದಿನಗೂಲಿ ನೌಕರರಿಗೆ ಕೆಲಸ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

    ಈ ಕುರಿತು ಸಮಿತಿ ನಿಯೋಗ ಜಿ.ಪಂ. ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್‌ಗೆ ಮಂಗಳವಾರ ಮನವಿ ಸಲ್ಲಿಸಿದರು. ಕರೊನಾ ಹಿನ್ನೆಲೆಯಲ್ಲಿ ದಿನಗೂಲಿ ನೌಕರರಿಗೆ ಕೆಲಸಕ್ಕೆ ಬರಬಾರದು ಎಂದು ಅಧಿಕಾರಿಗಳು ತಿಳಿಸುತ್ತಿರುವುದರಿಂದ ನೌಕರರಿಗೆ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ ಎಂದರು.

    ದಶಕಗಳ ಮೇಲ್ಪಟ್ಟು ವಸತಿ ನಿಲಯಗಳಲ್ಲಿ ಅಡುಗೆ ಕೆಲಸಗಾರರು, ಕಾವಲುಗಾರರಾಗಿ ದಿನಗೂಲಿ ಆಧಾರದಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಏಕಾಏಕಿ ಕೆಲಸಕ್ಕೆ ಬರಬೇಡಿ ಎಂದು ಹೇಳುವುದರಿಂದ ನೌಕರರು ಸಮಸ್ಯೆ ಎದುರಿಸುವಂತಾಗಿದೆ.

    ಕಾರಣ ವಸತಿ ನಿಲಯ ಸ್ವಚ್ಛತೆ ಮುಂತಾದ ಕೆಲಸಗಳಿಗಾಗಿ ದಿನಗೂಲಿ ನೌಕರರನ್ನು ಕೆಲಸಕ್ಕೆ ತೆಗೆದುಕೊಂಡು ಅವರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಸಮಿತಿ ಜಿಲ್ಲಾ ಸಂಚಾಲಕ ಎಂ.ವಸಂತಕುಮಾರ್, ಪದಾಧಿಕಾರಿಗಳಾದ ಎಂ.ಈರಣ್ಣ, ರವೀಂದ್ರನಾಥ ಪಟ್ಟಿ, ಉರುಕುಂದಮ್ಮ, ಲಕ್ಷ್ಮಿದೇವಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts