More

    ಸಾಗುವಳಿದಾರರಿಗೆ ಕಿರುಕುಳ ತಪ್ಪಿಸಿ

    ರಾಯಚೂರು: ತಾಲೂಕಿನ ವಿವಿಧ ಗ್ರಾಮದಲ್ಲಿ ಅರಣ್ಯ ಮತ್ತು ಗೈರಾಣಿ ಭೂಮಿ ಸಾಗುವಳಿ ಮಾಡುತ್ತಿರುವ ಬಡ ಜನರಿಗೆ ಪಟ್ಟಾ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. ಅರಣ್ಯ ಇಲಾಖೆ ಅಧಿಕಾರಿಗಳು ನೀಡುತ್ತಿರುವ ಕಿರುಕುಳವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು. ಕಳೆದ 60 ವರ್ಷಗಳಿಂದ ಅರಣ್ಯ ಭೂಮಿಯನ್ನು ಹಿಂದುಳಿದ ಸಮುದಾಯದವರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಅರಣ್ಯ ಇಲಾಖೆಯವರು ಬಲವಂತವಾಗಿ ಭೂಮಿಯಲ್ಲಿ ನೀಲಗಿರಿ ಸಸಿಗಳನ್ನು ನೆಡುವ ಮೂಲಕ ಸಾಗುವಳಿದಾರರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.

    ಸಾಗುವಳಿದಾರರ ಮೇಲೆ ಸುಳ್ಳು ಕೇಸ್ ದಾಖಲಿಸಿ ಬಡ ಕೂಲಿಕಾರ್ಮಿಕರನ್ನು ನ್ಯಾಯಾಲಯಕ್ಕೆ ಅಲೆಯುವಂತೆ ಮಾಡುತ್ತಿದ್ದಾರೆ. ಸರ್ಕಾರ ಸುತ್ತೋಲೆ ಹೊರಡಿಸಿ 4 ಎಕರೆ ಭೂಮಿ ಸಾಗುವಳಿ ಮಾಡಿದವರನ್ನು ಒಕ್ಕಲೆಬ್ಬಿಸಬಾರದು ಎಂದು ತಿಳಿಸಿತ್ತು. ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

    ಹಲವರು ಆನ್‌ಲೈನ್‌ಲ್ಲಿ ಪಟ್ಟಾಗಾಗಿ ಅರ್ಜಿ ಹಾಕಿಕೊಂಡಿದ್ದಾರೆ. ಈಗ ಅರ್ಜಿ ಸ್ವೀಕಾರ ಸ್ವಗಿತಗೊಂಡಿರುವುದು ಸಾಗುವಳಿದಾರರಿಗೆ ಸಮಸ್ಯೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಇದೆಲ್ಲವೂ ಗಮನಕ್ಕಿದ್ದರೂ ಒಕ್ಕಲೆಬ್ಬಿಸಲು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts