More

    ಕಾಟಿಕ್ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸಿ


    ರಾಯಚೂರು: ಹಿಂದುಳಿದ ಮತ್ತು ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಕಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಕಾಟಿಕ್, ಖಟಿಕ್ ಸಮುದಾಯದ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ ಒತ್ತಾಯಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 10 ರಾಜ್ಯಗಳಲ್ಲಿ ಕಾಟಿಕ್ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆ ಕುಲಶಾಸ್ತ್ರ ಅಧ್ಯಯನ ನಡೆಸಿ 2011ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. 1992ರಲ್ಲಿ ರಚಿಸಲಾಗಿದ್ದ ಡಿ.ಕೆ.ನಾಯ್ಕರ್ ಅಧ್ಯಕ್ಷತೆಯ ಸಮಿತಿ ನೀಡಿದ ವರದಿಯಲ್ಲಿ ಕಾಟಿಕ್ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸುವಂತೆ ತಿಳಿಸಲಾಗಿದೆ. ಆದರೆ ಸರ್ಕಾರಗಳು ಸಮುದಾಯದ ಬೇಡಿಕೆಯನ್ನು ಈಡೇರಿಸಲು ಮುಂದಾಗುತ್ತಿಲ್ಲ ಎಂದು ದೂರಿದರು.

    ಪಂಚಮಸಾಲಿ ಸಮುದಾಯವನ್ನು ಒಬಿಸಿಗೆ ಸೇರಿಸುವ ಕುರಿತು ಸರ್ವಪಕ್ಷಗಳ ಸಭೆ ಕರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಭೆಯಲ್ಲಿ ಕಾಟಿಕ್ ಸಮುದಾಯದ ಬೇಡಿಕೆಯನ್ನು ಪರಿಗಣಿಸಬೇಕು. ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಲು ಎಲ್ಲ ಪಕ್ಷಗಳು ಮುಂದೆ ಬರಬೇಕಿದೆ ಎಂದು ಆರ್.ಕೆ.ಸಿದ್ದರಾಮಣ್ಣ ಹೇಳಿದರು. ಪ್ರಮುಖರಾದ ಭಗತ್‌ರಾಜ್ ನಿಜಾಮಕರ್, ಕೆ.ಸತ್ಯನಾರಾಯಣ, ಜಯಂತ ಕಲ್ಯಾಣಕಾರಿ, ಅಶೋಕ ಕಲ್ಯಾಣಕಾರಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts