More

    ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪಿಸಿ

    ರಾಯಚೂರು: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿಯಲ್ಲಿ ಕೃಷಿ ತಾಂತ್ರಿಕ ಪದವೀಧರರಿಗೆ ಶೇ.15 ಹುದ್ದೆ ಮೀಸಲಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷಿ ವಿಜ್ಞಾನಗಳ ವಿವಿಯ ಆಡಳಿತ ಕಚೇರಿ ಮುಖ್ಯ ಗೇಟ್‌ಗೆ ಬೀಗ ಹಾಕಿ ಕೃಷಿ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

    ಕಳೆದ 15 ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸ್ಪಂದನೆ ದೊರೆಯದಿರುವುದರಿಂದ ಆಡಳಿತ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಇದಕ್ಕೂ ಮಣಿಯದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

    ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಯಾಗಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಕೃಷಿ ತಾಂತ್ರಿಕ, ಆಹಾರ ತಂತ್ರಜ್ಞಾನ, ಬಿಎಸ್ಸಿ ಕೃಷಿ ಮಾರುಕಟ್ಟೆ, ಸಹಕಾರ, ಜೈವಿಕ ತಂತ್ರಜ್ಞಾನ ಪದವೀಧರರನ್ನು ಶೇ.15 ಆದ್ಯತೆಯೊಳಗೆ ಸೇರಿಸಲಾಗಿದೆ. ಆದರೆ, ಹುದ್ದೆಗಳಲ್ಲಿ ಪ್ರತ್ಯೇಕ ಶೇ.15 ಮಾನ್ಯತೆ ನೀಡಿ ತಿದ್ದುಪಡಿ ಅಧಿಸೂಚನೆ ಹೊರಡಿಸಬೇಕು. ರಾಜ್ಯದಲ್ಲಿ ಪ್ರತ್ಯೇಕ ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ವಿವಿ ಅಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರೂ ವಿದ್ಯಾರ್ಥಿಗಳು ಗೇಟ್ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts