More

    ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ನೀಡಿ; ನ್ಯಾಯಾಧೀಶ ತ್ಯಾಗರಾಜ್ ಸಲಹೆ

    ಕಾನೂನು ಅರಿವು-ನೆರವು ಕಾರ್ಯಕ್ರಮ

    ರಾಯಚೂರು: ಮಕ್ಕಳು ಎಲ್ಲೇ ಇರಲಿ ತಮ್ಮ ಹಕ್ಕುಗಳನ್ನು ಪಡೆಯಲು ಅವಕಾಶ ಕಲ್ಪಿಸಬೇಕು. ಯಾವ ಮಗುವೂ ಶಿಕ್ಷಣದಿಂದ ವಂಚಿತವಾಗದಂತೆ ಪಾಲಕರು ಹಾಗೂ ಸಮುದಾಯ ನೋಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ತ್ಯಾಗರಾಜ್ ಎನ್. ಇನವಳ್ಳಿ ಹೇಳಿದರು.

    ನಗರದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು, ಬಾಲನ್ಯಾಯ ಕಾಯ್ದೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು. ಸಂಸ್ಥೆಯಲ್ಲಿ ಮೂಲಸೌಕರ್ಯದ ಜತೆಗೆ ಮಕ್ಕಳ ಹಕ್ಕುಗಳ ಉಲಂಘನೆ ಆಗದಂತೆ ಗಮನಹರಿಸಬೇಕು. ಸಂವಿಧಾನದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಶಿಕ್ಷಕರಿಗೆ ಸೂಚಿಸಿದರು.

    ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ದಯಾನಂದ ಎಂ. ಬೇಲೂರೆ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ಕಾನೂನು ಸೇವೆಗಳು ಬೇಕಾದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಿದ್ದಲ್ಲಿ ಉಚಿತ ಸಲಹೆ ಮತ್ತು ಸೇವೆ ನೀಡಲಾಗುವುದು. ಮಕ್ಕಳಿಗೆ ಶಿಕ್ಷಣವೇ ಮೊದಲ ಗುರಿಯಾಗಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts