ರಾಯಚೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ಭದ್ರತೆಗಾಗಿ 500 ಪೊಲೀಸ್ ಸಿಬ್ಬಂದಿ ನಿಯೋಜನೆ – ಎಸ್ಪಿ ಡಿ.ಕಿಶೋರ ಬಾಬು

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ಭದ್ರತೆಗಾಗಿ ಮೂರು ಸಿಆರ್‌ಪಿಎಫ್ ತುಕಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಎಸ್ಪಿ ಡಿ.ಕಿಶೋರ ಬಾಬು ತಿಳಿಸಿದರು.

ನಗರದ ಎಸ್‌ಆರ್‌ಪಿಎಸ್ ಮತ ಎಣಿಕೆ ಕೇಂದ್ರದಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದರು. ಮೇ 22ರ ಸಂಜೆ 4ರಿಂದ ಮೇ 23ರ ಮಧ್ಯರಾತ್ರಿ 12ರವರೆಗೆ ಜಿಲ್ಲಾಧಿಕಾರಿ ಮದ್ಯ ಮಾರಾಟ ಹಾಗೂ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಗುಂಪು ಕಟ್ಟಿಕೊಂಡು ಕುಳಿತುಕೊಳ್ಳುವುದು, ಅಹಿತಕರ ಘಟನೆಗೆ ಮುಂದಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೇಂದ್ರದಲ್ಲಿ ಮೂರು ಸಿಆರ್‌ಪಿಎಫ್ ತುಕಡಿ ನಿಯೋಜಿಸಲಾಗಿದ್ದು, ಒಬ್ಬ ಎಎಸ್ಪಿ, ಇಬ್ಬರು ಡಿವೈಎಸ್ಪಿ, ಸಿಪಿಐ, ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 500 ಸಿಬ್ಬಂದಿಯನ್ನು ಭದ್ರತೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ಏಜೆಂಟರು ತಮ್ಮ ಗುರುತಿನ ಚೀಟಿ ತೋರಿಸಿ ಒಳ ಪ್ರವೇಶಿಸಬೇಕು. ಈಗಾಗಲೇ ಎಲ್ಲ ನಿಯೋಜಿತ ಸಿಬ್ಬಂದಿಗೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *