More

    ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ

    ರಾಯಚೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಮಡಿವಾಳ ಮಾಚಿದೇವ ಜಯಂತಿಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ವರ್ಷ ಫೆ.1ರಂದು ಅದ್ದೂರಿಯಾಗಿ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ಅಂದು ಬೆಳಗ್ಗೆ 7.30ಕ್ಕೆ ಮಡಿವಾಳ ಮಾಚಿದೇವರ ದೇವಸ್ಥಾನದಲ್ಲಿ ರುದ್ರಾಭಿಷೇಕ ನಡೆಯಲಿದೆ. ನಂತರ ಮಾಚಿದೇವ ವೃತ್ತದಲ್ಲಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಕಲಾತಂಡಗಳೊಂದಿಗೆ ಮಡಿವಾಳ ಸಮುದಾಯದ ಭವನದವರೆಗೆ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸೋಮವಾರ ಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.

    18 ರಾಜ್ಯಗಳಲ್ಲಿ ಮಡಿವಾಳ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸಲಾಗಿದೆ. ರಾಜ್ಯದಲ್ಲಿ 2008ರಲ್ಲಿ ಕುಲಶಾಸ್ತ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಎಸ್ಸಿ ಪಟ್ಟಿಗೆ ಸೇರಿಸುವುದಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಎನ್.ಶಂಕ್ರಪ್ಪ ತಿಳಿಸಿದರು. ಪ್ರಮುಖರಾದ ಜಿ.ಶಿವಮೂರ್ತಿ, ಜಿ.ಸುರೇಶ, ಟಿ.ಮಲ್ಲೇಶ, ಎಂ.ಹುಸೇನಪ್ಪ, ಬಿ.ವಿರೂಪಾಕ್ಷಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts