More

    ರಾಯಚೂರು ಜಿಲ್ಲೆಯಲ್ಲಿ ಪ್ರತಿಭಟನೆಗೆ ಸೀಮಿತವಾದ ಬಂದ್, ಎಂದಿನಂತೆ ನಡೆದ ವಹಿವಾಟು

    ರಾಯಚೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದನ್ನು ಖಂಡಿಸಿ ಶನಿವಾರ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳ ಪ್ರತಿಭಟನೆಗೆ ಬಂದ್ ಸಿಮೀತವಾಗಿತ್ತು.

    ನಗರದ ಅಂಬೇಡ್ಕರ್ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಮರಾಠ ಅಭಿವೃದ್ಧಿ ನಿಗಮ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಬೆಳಗ್ಗೆಯಿಂದಲೇ ಎಂದಿನಂತೆ ವ್ಯಾಪಾರ, ವಹಿವಾಟು ನಡೆದಿದ್ದು, ಸಾರಿಗೆ ಸಂಸ್ಥೆ ಬಸ್ ಹಾಗೂ ಆಟೋ ಸಂಚಾರಕ್ಕೆ ಯಾವುದೇ ಅಡ್ಡಿಯಾಗಲಿಲ್ಲ. ಕೆಲವು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಪ್ರಾಧಿಕಾರ ರದ್ದುಗೊಳಿಸಲು ಒತ್ತಾಯಿಸಿದವು.

    ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು. ಕೆಲವು ಕಾರ್ಯಕರ್ತರು ಅರೆಬೆತ್ತಲೆಯಾಗಿ ಇಟ್ಟಂಗಿ ಹೊರುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

    ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಾದ ಅಶೋಕಕುಮಾರ ಜೈನ್, ಶಿವಕುಮಾರ ಯಾದವ್, ಬಸವರಾಜ ಕಳಸ, ವೀರೇಶ ಹೀರಾ, ಶರಣಪ್ಪ ಅಸ್ಕಿಹಾಳ, ವೆಂಕಟರೆಡ್ಡಿ, ಖಲೀಲ್ ಪಾಷಾ, ಹುಸೇನ್ ಬಾಷಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts