More

    ಮಾತೃಭೂಮಿ ತಾಯಿಗಿಂತ ಮಿಗಿಲು, ಸಂಸದ ರಾಜಾ ಅಮರೇಶ್ವರ ನಾಯಕ ಅನಿಸಿಕೆ

    ರಾಯಚೂರು: ಕನ್ನಡ ನಾಡಿನ ಸೊಬಗು ಹಾಗೂ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯುವ ಗೀತೆಗಳನ್ನು ನಾಡಿನಾದ್ಯಂತ ಕೋಟಿ ಕಂಠಗಳಲ್ಲಿ ಹಾಡುವ ಮೂಲಕ ವಿದ್ಯಾರ್ಥಿಗಳು, ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

    ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾತೃಭೂಮಿ ತಾಯಿಗಿಂತ ಮಿಗಿಲಾಗಿದೆ. ಕನ್ನಡ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಪುಣ್ಯವಾಗಿದೆ ಎಂದರು.

    ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಕನ್ನಡ ನಾಡಿನ ಭಾಷೆ, ನೆಲ, ಜಲದ ಕುರಿತು ಅಭಿಮಾನ ಸಾರುವ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆಯ ಉಳಿವಿಗಾಗಿ ಎಲ್ಲರೂ ಶ್ರಮಿಸಬೇಕೆಂದರು. ಕಾರ್ಯಕ್ರಮದಲ್ಲಿ ಕನ್ನಡದ ಆರು ಗೀತೆಗಳನ್ನು ಹಾಡಲಾಯಿತು. ಮೊದಲಿಗೆ ನಾಡಗೀತೆ ಹಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts