More

    ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಅಧ್ಯಯನ ಅಗತ್ಯ

    ರಾಯಚೂರು: ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ವೈದ್ಯಕೀಯ ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಹೊಸ ಆವಿಷ್ಕಾರಗಳ ಮಾಹಿತಿ ಪಡೆದುಕೊಂಡು ಭವಿಷ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೃದಯರೋಗ ತಜ್ಞ ಗಿರೀಶ ನವಸುಂದಿ ಹೇಳಿದರು.

    ಸ್ಥಳೀಯ ನವೋದಯ ವೈದ್ಯಕೀಯ ಕಾಲೇಜಿನಲ್ಲಿ ಆರೋಗ್ಯ ಚಟುವಟಿಕೆ ಮತ್ತು ಅವಕಾಶಗಳ ಕುರಿತು ಮಂಗಳವಾರ ಏರ್ಪಡಿಸಿದ್ದ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಜ್ಞಾನದ ವಿನಿಮಯ ಮಾಡಿಕೊಳ್ಳುವ ಮೂಲಕ ವೈದ್ಯಕೀಯ ಸವಾಲುಗಳನ್ನು ನಿವಾರಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದರು.

    ವೈದ್ಯಕೀಯ ಕ್ಷೇತ್ರದಲ್ಲಿ ನಿತ್ಯವೂ ಹೊಸ ಅವಿಷ್ಕಾರಗಳು ಮತ್ತು ಚಿಕಿತ್ಸಾ ಪದ್ಧತಿಯ ಬದಲಾವಣೆ ನಡೆಯುತ್ತಿದೆ. ವೈದ್ಯಕೀಯ ವಿದ್ಯಾರ್ಥಿಗಳು ಅವುಗಳನ್ನು ಅರಿತುಕೊಂಡು ಮುನ್ನಡೆದಾಗ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಗಿರೀಶ ನವಸುಂದಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts