More

    ಮಾನಸಿಕವಾಗಿ ದೃಢವಾಗಿದ್ದಾಗ ಉನ್ನತಿ ಸಾಧ್ಯ

    ರಾಯಚೂರು: ಎಲ್ಲರೂ ಮಹಿಳೆಯರ ಮನಸ್ಥಿತಿ ಬದಲಾಗಬೇಕು ಎನ್ನುತ್ತಾರೆ. ಆದರೆ, ವಾಸ್ತವವಾಗಿ ಪುರುಷರ ಮನಸ್ಥಿತಿ ಬದಲಾದಾಗ ಹೆಣ್ಣು ಸಬಲೆಯಾಗಲು ಸಾಧ್ಯ. ಈ ಮೂಲಕ ಮಹಿಳೆಯರ ಶೋಷಣೆಯೂ ನಿಲ್ಲಲಿದೆ ಎಂದು ರಿಮ್ಸ್ ಸಹಾಯಕ ಪ್ರಾಧ್ಯಾಪಕಿ, ಮೇಜರ್ ಡಾ.ದೀಪಶ್ರೀ ಪಾಟೀಲ್ ಹೇಳಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜಯವಾಣಿ, ದಿಗ್ವಿಜಯ ನ್ಯೂಸ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಪ್ರಥಮ ದರ್ಜೆ ಕಾಲೇಜು, ಎಚ್‌ಸಿಜಿ ಮತ್ತು ಕಣ್ವ ಆಸ್ಪತ್ರೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಭಾನುವಾರ ಹಮ್ಮಿಕೊಂಡಿದ್ದ ಕ್ಯಾನ್ಸರ್ ಉಚಿತ ತಪಾಸಣೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮಹಿಳೆಯರ ಮೇಲಿನ ಶೋಷಣೆ ಸಾಮಾನ್ಯ ಎನ್ನುವಂತಾಗಿದ್ದರೂ, ಮಹಿಳೆಯರು ಮನೆಗೆ ಸಿಮೀತವಾಗದೆ ಎಲ್ಲ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಮಾನಸಿಕವಾಗಿ ಗಟ್ಟಿಯಾಗಿದ್ದಾಗ ಮಾತ್ರ ಮುಂದೆ ಬರಲು ಸಾಧ್ಯವಾಗಲಿದೆ.

    ಆರೋಗ್ಯ ವಿಷಯದಲ್ಲಿ ಪುರುಷರಿಗಿಂತ ಮಹಿಳೆಯರು ಉತ್ತಮರಾಗಿದ್ದಾರೆ. ಇತ್ತೀಚೆಗೆ ಮಹಿಳೆಯರಲ್ಲಿ ಗರ್ಭಕೋಶ, ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಚಿಕ್ಕ ವಯಸ್ಸಿನ ಯುವತಿಯಲ್ಲಿ ಸ್ತನ ಕ್ಯಾನ್ಸರ್ ಕಂಡು ಬರುತ್ತಿರುವುದು ಆತಂಕಕಾರಿಯಾಗಿದೆ. ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಡಾ.ದೀಪಶ್ರೀ ಪಾಟೀಲ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts