More

    ಕನಿಷ್ಠ ವೇತನಕ್ಕಾಗಿ ಕಾರ್ಮಿಕರ ಒತ್ತಾಯ

    ರಾಯಚೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಫ್ಟ್ ಕಾರ್ಮಿಕರಿಗೆ ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘ ಗುರುವಾರ ಪ್ರತಿಭಟನೆ ನಡೆಸಿತು.

    ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿತು. ಅನೇಕ ವರ್ಷಗಳಿಂದ ಕಾರ್ಮಿಕರು ಕನಿಷ್ಠ ವೇತನ ಸೇರಿ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಗುತ್ತಿಗೆದಾರರು ಅಗತ್ಯ ಸೌಲಭ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಜೆಸ್ಕಾಂನ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮತ್ತು ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಳೆದ ಎರಡು ದಶಕಗಳಿಂದ ಶಿಫ್ಟ್ ಹೆಲ್ಪರ್ಸ್ ಹಾಗೂ ಶಿಫ್ಟ್ ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸಲಾಗುತ್ತಿದೆ. ಸೇವಾ ಕೇಂದ್ರಗಳಲ್ಲಿ ಗ್ಯಾಂಗ್‌ಮನ್‌ಗಳು ಹಗಲೂ ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸೇವೆಗಳನ್ನು ಏಜೆನ್ಸಿಗಳಿಗೆ ಹೊರಗುತ್ತಿಗೆ ಆ ಮೂಲಕ ಪಡೆಯಲಾಗುತ್ತಿದೆ. ಏಜೆನ್ಸಿಗಳು ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಸಮವಸ್ತ್ರ, ಬೋನಸ್ ಸೇರಿ ಮತ್ತಿತರ ಸೌಲಭ್ಯಗಳನ್ನು ನೀಡದೆ ಕಾರ್ಮಿಕರನ್ನು ವಂಚಿಸುತ್ತಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

    ಕರ್ತವ್ಯ ನಿರತರಾಗಿದ್ದಾಗ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕೂಡಲೇ ಕಾರ್ಮಿರಿಗೆ ಕನಿಷ್ಠ ವೇತನ ಹಾಗೂ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸಂಘದ ಜಿಲ್ಲಾಧ್ಯಕ್ಷ ಎನ್.ಎಸ್.ವೀರೇಶ, ಪದಾಧಿಕಾರಿಗಳಾದ ತಿರುಮಲರಾವ್, ಶಿವರಾಜ್, ವಿನೋದಕುಮಾರ, ಹನುಮಂತರಾವ ಜೋಷಿ, ಮಾಯಪ್ಪ, ಮಲ್ಲಿಕಾರ್ಜುನ, ಹನುಮಂತ, ಶಿವಕುಮಾರ, ನಿತೀಶ್ ಕುಮಾರ, ಶಾಂತಕುಮಾರ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts