More

    ಬಡವರಿಗೆ ಕೇಂದ್ರ ಸರ್ಕಾರದಿಂದ ದ್ರೋಹ


    ಶಾಸಕ ಬಸನಗೌಡ ದದ್ದಲ್ ಆರೋಪ ಅಕ್ಕಿ ನೀಡದ್ದಕ್ಕೆ ಪ್ರತಿಭಟನೆ

    ರಾಯಚೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆಗೆ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರ ಮತ್ತು ಎಫ್‌ಸಿಐ ವಿರುದ್ಧ ರಾಯಚೂರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ನಿಂದ ಎಫ್‌ಸಿಐ ಗೋದಾಮು ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

    ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಮುಟ್ಟಿದರೆ ನಮಗೆ ಉಳಿಗಾಲವಿಲ್ಲ ಎಂದು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಅಕ್ಕಿ ನೀಡಲು ನಿರಾಕರಿಸುತ್ತಿದೆ. ಈ ಹಿಂದೆ ಕೆಜಿಗೆ 34 ರೂ.ನಂತೆ ಅಕ್ಕಿ ನೀಡಲು ಒಪ್ಪಿಕೊಂಡಿದ್ದ ಎಫ್‌ಸಿಐ ಏಕಾಏಕಿ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದ್ದು, ಅಕ್ಕಿ ಕೊಡಲು ನಿರಾಕರಿಸುವ ಮೂಲಕ ಬಡಜನರಿಗೆ ದ್ರೋಹ ಬಗೆಯುತ್ತಿದೆ ಎಂದು ದೂರಿದರು.

    ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ 2.38 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯವಿದೆ. ಅಕ್ಕಿಯನ್ನು ಉಚಿತವಾಗಿ ನೀಡುವಂತೆ ಕೇಳುತ್ತಿಲ್ಲ. ನಿಗದಿತ ಹಣ ನೀಡುವುದಾಗಿ ಹೇಳುತ್ತಿದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸುತ್ತಿದೆ. ಎಥೆನಾಲ್ ಉತ್ಪಾದನೆಗೆ 29.5 ಲಕ್ಷ ಟನ್ ಅಕ್ಕಿ ನೀಡುವ ಕೇಂದ್ರ ಸರ್ಕಾರ ಜನರಿಗೆ ಅಕ್ಕಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಎಫ್‌ಸಿಐ ಗೋದಾಮುಗಳಲ್ಲಿ 728.86 ಲಕ್ಷ ಮೆಟ್ರಿಕ್ ಅನ್ ಅಕ್ಕಿ ಬಳಸಲು ಯೋಗ್ಯವಿಲ್ಲದಂತೆ ಕೊಳೆತು ಹೋಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಸನಗೌಡ ದದ್ದಲ್ ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts