More

    ಬಿಜೆಪಿಗೆ ಕಾಡುತ್ತಿದೆ ಸೋಲಿನ ಭೀತಿ

    ರಾಯಚೂರು: ನೆರೆ ಹಾವಳಿ ವೀಕ್ಷಣೆಗೆ ಮಡಿಕೇರಿಗೆ ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಸಾತ್‌ಮೈಲ್ ಬಳಿಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆ ಎದುರು ಕಾಂಗ್ರೆಸ್ ಗ್ರಾಮೀಣ ಘಟಕದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಶಾಸಕ ಬಸನಗೌಡ ದದ್ದಲ್ ಮಾತನಾಡಿ, ರಾಜ್ಯದಲ್ಲಿ ಹತ್ತಾರು ವರ್ಷ ಕಾಂಗ್ರೆಸ್ ಅಧಿಕಾರ ನಡೆಸಿದ್ದು, ಎಂದೂ ಪ್ರತಿಪಕ್ಷ ನಾಯಕರಿಗೆ ಅಡ್ಡಿಪಡಿಸಿರುವ ಘಟನೆ ನಡೆದಿಲ್ಲ. ಆದರೆ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದು ತಮ್ಮ ಕೀಳುಮಟ್ಟ ಪ್ರದರ್ಶಿಸಿದ್ದಾರೆ. ಬಿಜೆಪಿ ಸೋಲಿನ ಭೀತಿ ಕಾಡುತ್ತಿರುವುದರಿಂದ ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ದೂರಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನ ನೆಮ್ಮದಿ ಕಳೆದುಕೊಂಡಿದ್ದಾರೆ. ಜನರ ಭಾವನೆಗಳನ್ನು ಕೆರಳಿಸಿ ಕೋಮು ಸಂಘರ್ಷಕ್ಕೆ ಕಾರಣವಾಗಿರುವ ಬಿಜೆಪಿ ಸರ್ಕಾರ ಈಗ ವಿರೋಧ ನಾಯಕರ ಪ್ರವಾಸಕ್ಕೂ ಅಡ್ಡಿಪಡಿಸುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿರುವ ಸರ್ಕಾರ ಜನರಿಗೆ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ, ದೇವಸೂಗೂರು ಬ್ಲಾಕ್ ಅಧ್ಯಕ್ಷ ಕೆ.ಪಂಪಾಪತಿ, ಮಲ್ಲಿಕಾರ್ಜುನ, ಕೆ.ಶಾಂತಪ್ಪ, ಎ.ವಸಂತಕುಮಾರ, ಸಂಗಮೇಶ ಭಂಡಾರಿ, ಯು.ಗೋವಿಂದರೆಡ್ಡಿ, ರಾಜಶೇಖರ ರಂಗಾ, ಚಂದ್ರಶೇಖರ ಪೋಗಲ್, ನಾಗೇಂದ್ರಪ್ಪ ಮಟಮಾರಿ, ನರಸನಗೌಡ, ಅಮರೇಗೌಡ ಹಂಚಿನಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts