More

    ನಿಗಮಗಳ ಮೂಲಕ ಸಣ್ಣ ಸಮುದಾಯಗಳ ಅಭಿವೃದ್ಧಿ

    ರಾಯಚೂರು: ಯಾವುದೇ ಸಮುದಾಯ ಸಂಘಟಿತವಾಗದಿದ್ದರೆ, ಆ ಸಮುದಾಯದ ಜನರ ಸಮಸ್ಯೆಗಳನ್ನು ಯಾರೂ ಕೇಳುವುದಿಲ್ಲ. ಸಮುದಾಯದ ಜನರು ಹಕ್ಕು ಪಡೆಯಲು ಒಗ್ಗಟ್ಟಾಗಿ ಧ್ವನಿ ಎತ್ತುವ ಕೆಲಸ ಮಾಡಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

    ವಿದ್ಯಾನಗರದ ಈಶ್ವರ ದೇವಸ್ಥಾನದಲ್ಲಿ ಗಾಣಿಗ ಸಂಘದ ತಾಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಸಣ್ಣ ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ, ಮಂಡಳಿಗಳನ್ನು ಸ್ಥಾಪಿಸಿದ್ದು, ಎಲ್ಲರೂ ಸಮುದಾಯದ ಅಭಿವೃದ್ಧಿ ಶ್ರಮಿಸಬೇಕು ಎಂದರು.

    ಗಾಣಿಗ ಸಮುದಾಯದವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ವೀರಶೈವ ಸಮಾಜ ಆಲದ ಮರವಿದ್ದಂತೆ, ನಾವೆಲ್ಲರೂ ಅದರ ಬೇರುಗಳಿದ್ದಂತೆ. ಎಲ್ಲ ಒಳಪಂಗಡದವರು ಸೇರಿ ವೀರಶೈವ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಸ್ವಾಭಿಮಾನದ ಬದುಕು ನಡೆಸಲು ಗಾಣಿಗ ಸಮುದಯದ ಕುಲಕಸುಬುದಾರರ ಉದ್ಯೋಗ ಉನ್ನತೀಕರಿಸಲು ಕಾಯಕ ಯೋಜನೆ ರೂಪಿಸಲಾಗಿದೆ. ದುಡಿಯುವ ಸಮುದಾಯಗಳಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಗರದಲ್ಲಿ ಗಾಣಿಗ ಸಮುದಾಯ ಭವನ ನಿರ್ಮಾಣಕ್ಕೆ 15 ಲಕ್ಷ ರೂ. ಅನುದಾನ ನೀಡುವುದಾಗಿ ಡಾ.ಶಿವರಾಜ ಪಾಟೀಲ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts