More

    ಎಂಎಲ್ಸಿ ಶರಣಗೌಡ ಹೆಸರು ಸೇರ್ಪಡೆ ಕಾನೂನು ಬಾಹಿರ – ಮಾಜಿ ಶಾಸಕ ಎ.ಪಾಪಾರೆಡ್ಡಿ ಆರೋಪ

    ರಾಯಚೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ಪ್ರಕ್ರಿಯೆ ಪ್ರಕಟವಾದ ನಂತರ ಮತದಾರರ ಪಟ್ಟಿಯಲ್ಲಿ ಎಂಎಲ್ಸಿ ಶರಣಗೌಡ ಬಯ್ಯಪುರ ಹೆಸರನ್ನು ಸೇರ್ಪಡೆ ಮಾಡಿರುವುದು ಕಾನೂನು ಬಾಹಿರ ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ಆರೋಪಿಸಿದರು.

    ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರು ಎಲ್ಲಿಯಾದರೂ ಮತದಾನದ ಹಕ್ಕು ಪಡೆಯಬಹುದು. ಆದರೆ ಮತದಾರರ ಪಟ್ಟಿಯಲ್ಲಿ ಒಂದೇ ಕಡೆ ಹೆಸರು ಇರಬೇಕು. ಲಿಂಗಸುಗೂರು ತಾಲೂಕಿನ ಬಯ್ಯಪುರ ಗ್ರಾಮದ ಮತದಾರರ ಪಟ್ಟಿಯಲ್ಲಿರುವ ಶರಣಗೌಡ ಹೆಸರನ್ನು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮತ ಹಾಕಲು ಅನುಕೂಲವಾಗುವಂತೆ ಕಾಂಗ್ರೆಸ್ ನಾಯಕರು ಸ್ಥಳೀಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ.

    ಲಿಂಗಸುಗೂರು ತಾಲೂಕಿನ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದುಹಾಕಿಲ್ಲ. ಸ್ಥಳೀಯ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮಾ.22ರಂದು ಅನುಮತಿ ನೀಡಲಾಗಿದೆ. ಅದೇ ದಿನವೇ ರಾಯಚೂರು ನಗರದ ಭೂತ ನಂ 74ರಲ್ಲಿ ಸೇರ್ಪಡೆಗೆ ಅನುಮತಿ ನೀಡಿರುವುದು ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಾಗಿದೆ. ಮತದಾರರ ಪಟ್ಟಿಯಿಂದ ಶರಣಗೌಡ ಬಯ್ಯಪುರ ಹೆಸರು ಕೈಬಿಡದಿದ್ದರೆ, ಚುನಾವಣಾಧಿಕಾರಿ ವಿರುದ್ದ ಕಾನೂನು ಹೋರಾಟ ನಡೆಸಲಾಗುವುದು. ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಶರಣಗೌಡ ಬಯ್ಯಪುರಗೆ ಮತದಾನಕ್ಕೆ ಅವಕಾಶ ನೀಡಬಾರದು ಎಂದು ಪಾಪಾರೆಡ್ಡಿ ಒತ್ತಾಯಿಸಿದರು.

    ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್ ಮಾತನಾಡಿ, ಎಂಎಲ್ಸಿ ಶರಣಗೌಡ ಬಯ್ಯಪುರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬಿ.ವಿ.ನಾಯಕ ಹಾಗೂ ಮುಖಂಡ ರವಿ ಬೋಸರಾಜು ಒತ್ತಡ ಹಾಕಿದ್ದಾರೆ ಎಂದು ದೂರಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಬಿ.ಗೋವಿಂದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts