More

    ಬೈಪಾಸ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ; ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿಕೆ


    ರಾಯಚೂರು: ಕಲಬುರಗಿ-ಗುತ್ತಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ರಾಯಚೂರು, ಯಾದಗಿರಿ, ಶಹಾಪುರದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 400 ಕೋಟಿ ರೂ.ಗೆ ಅನುದಾನ ನೀಡಿದೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

    ತಾಲೂಕಿನ ದೇವಸುಗೂರು ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ 157 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಗೆ ಸೋಮವಾರ ಭೂಮಿ ನೆರವೇರಿಸಿ ಮಾತನಾಡಿದರು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕೃಷ್ಣಾ ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗುತ್ತಿದೆ. ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ಕೃಷ್ಣಾ ಸೇತುವೆಯನ್ನು ಬೋಸ್ಟನ್ ಮಾದರಿಯ ನಾಲ್ಕು ಪಥಗಳ ಸೇತುವೆಯಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.

    ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ರಾಯಚೂರು ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ನಾಲ್ಕೈದು ಹೆದ್ದಾರಿಗಳು ಹಾದು ಹೋಗಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಶಾಸಕ ಬಸನಗೌಡ ದದ್ದಲ್, ಆರ್‌ಡಿಎ ಮಾಜಿ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಜಿಪಂ ಮಾಜಿ ಸದಸ್ಯ ಸತೀಶ, ಮುಖಂಡರಾದ ಕೆ.ಪಂಪಾಪತಿ, ಬಸವರಾಜ, ಮುಕ್ತಿಯಾರ್, ನಾಗೇಂದ್ರಪ್ಪ ಮಟಮಾರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts